ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ ಅಸ್ತ್ರ: ಸುನಿತಾ

ಮಂಗಳವಾರ, ಮಾರ್ಚ್ 26, 2019
33 °C

ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ ಅಸ್ತ್ರ: ಸುನಿತಾ

Published:
Updated:
ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ ಅಸ್ತ್ರ: ಸುನಿತಾ

ಶಕ್ತಿನಗರ: ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ ಪ್ರಬಲ ಅಸ್ತ್ರ ಎಂದು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಸುನಿತಾ ಸಿದ್ರಾಮ್‌ ಹೇಳಿದರು.

ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ (ಆರ್‌ಟಿಪಿಎಸ್‌), ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ (ವೈಟಿಪಿಎಸ್), ಮಹಿಳಾ ಉದ್ಯೋಗಿಗಳ ಸಂಘದಿಂದ ಡಾ.ಬಿ.ಆರ್‌.ಅಂಬೇಡ್ಕರ್ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಹೆಣ್ಣುಮಕ್ಕಳ ಸ್ವಾವಲಂಬನೆ ಮತ್ತು ಸಬಲೀಕರಣದ ದೃಷ್ಟಿಯಿಂದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಪುರುಷನ ಯಶಸ್ಸಿನ ಹಿಂದೆ ಮಹಿಳೆ ಇದ್ದಾಳೆ’  ಎಂದು ಅಭಿಪ್ರಾಯಪಟ್ಟರು.

ಜೆ.ಮಲ್ಲಾಪುರ ಸಮುದಾಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಕೀಯ ಅಧೀಕ್ಷಕಿ ಡಾ.ಶಾರದಾ ಹುಲಿನಾಯಕ ಮಾತನಾಡಿದರು.

ಆರ್‌ಟಿಪಿಎಸ್‌ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಸಿ.ವೇಣುಗೋಪಾಲ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆರ್‌ಟಿಪಿಎಸ್‌ ಚಾಲನೆ ಮತ್ತು ನಿರ್ವಹಣೆ ವಿಭಾಗದ ಮುಖ್ಯ ಎಂಜಿನಿಯರ್ ಜಿ.ಹನುಮಂತಪ್ಪ, ಕಲ್ಲಿದ್ದಲು ವಿಭಾಗದ ಮುಖ್ಯ ಎಂಜಿನಿಯರ್ ಎನ್.ಕೆ.ಪ್ರಭಾಕರ, ವೈಟಿಪಿಎಸ್ ಮುಖ್ಯ ಎಂಜಿನಿಯರ್ ಜಿ.ಸಿ.ಮಹೇಂದ್ರ, ಮಹಿಳಾ ನೌಕರರ ಸಂಘದ ಅಧ್ಯಕ್ಷ ಗೀತಾ ಪ್ರಭುಶಂಕರ, ಉಪಾಧ್ಯಕ್ಷೆ ಪುತಲಿಬಾಯಿ ಕಬಾಡೆ, ಕಾರ್ಯದರ್ಶಿ ಗಾಯಿತ್ರಿ, ಆರ್‌ಟಿಪಿಎಸ್‌ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಂಕರ ಯಾದವಾಡ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry