ಬಾಹ್ಯಾಕಾಶ ವಿಜ್ಞಾನಿ ಯು.ಆರ್‌. ರಾವ್‌ರನ್ನು ಸ್ಮರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

7

ಬಾಹ್ಯಾಕಾಶ ವಿಜ್ಞಾನಿ ಯು.ಆರ್‌. ರಾವ್‌ರನ್ನು ಸ್ಮರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Published:
Updated:
ಬಾಹ್ಯಾಕಾಶ ವಿಜ್ಞಾನಿ ಯು.ಆರ್‌. ರಾವ್‌ರನ್ನು ಸ್ಮರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಖ್ಯಾತ ಬಾಹ್ಯಾಕಾಶ ವಿಜ್ಞಾನಿ ದಿವಂಗತ ಪ್ರೊ.ಯು.ಆರ್‌. ರಾವ್‌ ಜನ್ಮ ದಿನದ (ಮಾರ್ಚ್‌ 10) ಹಿನ್ನೆಲೆಯಲ್ಲಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದ್ದಾರೆ.

‘ಭಾರತದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ದೇಶದ ಪ್ರಪ್ರಥಮ ಉಪಗ್ರಹ ಆರ್ಯಭಟದ ರೂವಾರಿಗಳೂ ಆದ ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಉಡುಪಿ ರಾಮಚಂದ್ರರಾವ್ ಅವರ ಜನ್ಮ ದಿನದಂದು ನಾಡು ಅವರ ಸೇವೆಯನ್ನು ಹೆಮ್ಮೆಯಿಂದ ಸ್ಮರಿಸುತ್ತದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಉಡುಪಿಯವರಾದ ಪ್ರೊ.ಯು.ಆರ್‌. ರಾವ್‌ ಕಳೆದ ವರ್ಷ ಜುಲೈ 23ರಂದು ನಿಧನರಾಗಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ ಗೋವಾ ಮುಖ್ಯಮಂತ್ರಿಗಳ ಅನಾರೋಗ್ಯದ ಬಗ್ಗೆ ಪ್ರಸ್ತಾಪಿಸಿದ ಸಿದ್ದರಾಮಯ್ಯ, ‘ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಸುದ್ದಿ ತಿಳಿದು ಬೇಸರವಾಯಿತು. ಅವರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry