ಸಾಮೂಹಿಕ ಅತ್ಯಾಚಾರ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ

7

ಸಾಮೂಹಿಕ ಅತ್ಯಾಚಾರ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ

Published:
Updated:

ಕೋಟ (ರಾಜಸ್ಥಾನ): ಇಲ್ಲಿನ ಬರಾನ್‌ ಜಿಲ್ಲೆಯಲ್ಲಿ 40 ವರ್ಷದ ಮಹಿಳೆಯ ಮೇಲೆ ಆರು ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ್ದು, ಆ ದುಷ್ಕೃತ್ಯವನ್ನು ವಿಡಿಯೊ ಮಾಡಿ ನಂತರ ಸಾಮಾಜಿಕ ಜಾಲತಾಣಗಳಿಗೆ ಅಪ್‌ಲೋಡ್‌ ಮಾಡಲಾಗಿದೆ.

ಒಂದು ತಿಂಗಳ ಹಿಂದೆಯೇ ಅತ್ಯಾಚಾರ ನಡೆದಿದ್ದರೂ ಸಂತ್ರಸ್ತ ಮಹಿಳೆ ಈ ಬಗ್ಗೆ ದೂರು ದಾಖಲಿಸಿರಲಿಲ್ಲ. ವಿಡಿಯೊ ಅಪ್‌ಲೋಡ್‌ ಆಗಿರುವುದು ತಿಳಿದ ನಂತರ, ಮಾರ್ಚ್‌ 5ರಂದು ಬರಾನ್‌ನ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ 376 ಮತ್ತು ಐಟಿ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ. ಇದುವರೆಗೆ ಯಾರನ್ನೂ ಬಂಧಿಸಿಲ್ಲ’ ಎಂದು ಮಹಿಳಾ ಠಾಣೆಯ ಠಾಣಾಧಿಕಾರಿ ಅನೀಸ್ ಅಹಮ್ಮದ್ ತಿಳಿಸಿದ್ದಾರೆ.

‘ಒಂದು ತಿಂಗಳ ಹಿಂದೆ ಅತ್ತೆ, ಮಾವ ಅವರನ್ನು ನೋಡಲು ಬರಾನ್‌ಗೆ ತೆರಳುತ್ತಿದ್ದಾಗ, ಪರಿಚಯವಿದ್ದ ಚೇತನ್‌ ಮೀನಾ (21) ಡ್ರಾಪ್‌ ಕೊಡುವ ನೆಪದಲ್ಲಿ ಬೈಕ್‌ನಲ್ಲಿ ನನ್ನನ್ನು ಅಪರಿಚಿತ ಜಾಗಕ್ಕೆ ಕರೆದೊಯ್ದ. ಅಲ್ಲಿ ಇದ್ದ ಅವನ ಇತರ ಐವರು ಸ್ನೇಹಿತರು ಮತ್ತು ಚೇತನ್‌ ಸೇರಿ ನನ್ನ ಮೇಲೆ ಅತ್ಯಾಚಾರ ಎಸಗಿದರು. ಅಲ್ಲದೆ, ಅದನ್ನು ವಿಡಿಯೊ ಚಿತ್ರೀಕರಣ ಮಾಡಿಕೊಂಡರು. ಈ ಕುರಿತು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿದ್ದರು’ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry