ಕಾವೇರಿ: ವಿಶೇಷ ಅಧಿವೇಶನ ಕರೆಯಲು ಸ್ಟ್ಯಾಲಿನ್ ಆಗ್ರಹ

7

ಕಾವೇರಿ: ವಿಶೇಷ ಅಧಿವೇಶನ ಕರೆಯಲು ಸ್ಟ್ಯಾಲಿನ್ ಆಗ್ರಹ

Published:
Updated:

ಚೆನ್ನೈ: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಸಂಪನ್ಮೂಲ ಸಚಿವರು ಕರೆದ ಸಭೆ ‘ಕಣ್ಣೊರೆಸುವ ತಂತ್ರ’ ಎಂದು ಕಿಡಿಕಾರಿರುವ ವಿರೋಧ ಪಕ್ಷದ ನಾಯಕ ಎಂ.ಕೆ.ಸ್ಟ್ಯಾಲಿನ್, ನದಿ ನೀರಿನ ವಿವಾದದ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದ ಬಗ್ಗೆ ಕೇಂದ್ರವು ಮಲತಾಯಿ ಧೋರಣೆ ಅನುಸರಿಸುತ್ತಿದೆ. ಮುಂದಿನ ವಾರ ಆರಂಭವಾಗಲಿರುವ ಬಜೆಟ್‌ ಅಧಿವೇಶನಕ್ಕೂ ಮುನ್ನವೇ ವಿಶೇಷ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.

ಕಾವೇರಿ ವಿವಾದ ಕುರಿತು ಸುಪ್ರೀಂಕೋರ್ಟ್‌ ಆದೇಶದ ಬಗ್ಗೆ ಮಾರ್ಚ್‌ 3ರಂದು ತಮ್ಮೊಂದಿಗೆ ನಡೆದ ಮಾತುಕತೆ ಸಂದರ್ಭದಲ್ಲಿ ಈ ವಿಷಯ ಪ್ರಸ್ತಾಪಿಸಿದ್ದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ನಡುವಿನ ಜಲವಿವಾದ ಇದಾಗಿದ್ದು ಸುಪ್ರೀಂಕೋರ್ಟ್ ನಿರ್ದೇಶನದಂತೆ ‘ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ’ ರಚಿಸಬೇಕು. ಈ ವಿಷಯದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದಂತೆ ಕೇಂದ್ರವನ್ನು ಒತ್ತಾಯಿಸಬೇಕು ಎಂದು ಮನವಿ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry