ಕುಮಾರಸ್ವಾಮಿಯಿಂದ ಪಾಠ ಕಲಿಯಬೇಕಿಲ್ಲ: ಸಿದ್ದರಾಮಯ್ಯ

7

ಕುಮಾರಸ್ವಾಮಿಯಿಂದ ಪಾಠ ಕಲಿಯಬೇಕಿಲ್ಲ: ಸಿದ್ದರಾಮಯ್ಯ

Published:
Updated:
ಕುಮಾರಸ್ವಾಮಿಯಿಂದ ಪಾಠ ಕಲಿಯಬೇಕಿಲ್ಲ: ಸಿದ್ದರಾಮಯ್ಯ

ಮೈಸೂರು: ‘ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಂದ ನಾನು ಆಡಳಿತದ ಪಾಠ ಕಲಿಯಬೇಕಿಲ್ಲ. ಅವರು ರಾಜಕೀಯಕ್ಕೆ ಬರುವುದಕ್ಕೆ ಮುಂಚೆಯೇ ನಾನು ಮಂತ್ರಿಯಾಗಿದ್ದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಶನಿವಾರ ಕುಟುಕಿದರು.

‘ಸಿದ್ದರಾಮಯ್ಯ ಅವರು ಒಕ್ಕಲಿಗ ಅಧಿಕಾರಿಗಳನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ’ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಅಧಿಕಾರಿಗಳ ಜತೆ ಹೇಗಿರಬೇಕು, ಹೇಗೆ ಕೆಲಸ ಮಾಡಿಸಬೇಕು ಎಂಬುದು ನನಗೆ ಗೊತ್ತಿದೆ. ಅದನ್ನು ಕುಮಾರಸ್ವಾಮಿ ಅವರಿಂದ ಕಲಿಯಬೇಕಿಲ್ಲ. ಇದು ರಾಜಕೀಯ ಪ್ರೇರಿತ ಆರೋಪ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿ– ಸುಳ್ಳು ವರದಿ: ರಾಜ್ಯದ ಸರ್ಕಾರಿ ಹಾಸ್ಟೆಲ್‌ಗಳು ದುಸ್ಥಿತಿಯಲ್ಲಿವೆ ಎಂಬ ಬಿಜೆಪಿಯ ಸಮೀಕ್ಷಾ ವರದಿ ಸುಳ್ಳಿನಿಂದ ಕೂಡಿದೆ ಎಂದರು.

‘ನಮ್ಮ ಕಾಲದಲ್ಲಿ ಸ್ಥಾಪನೆಯಾದಷ್ಟು ಹಾಸ್ಟೆಲ್‌ಗಳು ಯಾರ ಕಾಲದಲ್ಲೂ ಆಗಿಲ್ಲ. ನಿರ್ವಹಣೆಗೆ ನಮ್ಮಷ್ಟು ಯಾರೂ ಗಮನ ಕೊಟ್ಟಿಲ್ಲ. ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಕೆಲಸ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry