ದ್ವಿತೀಯ ಪಿಯು ವಿದ್ಯಾರ್ಥಿ ಆತ್ಮಹತ್ಯೆ

7

ದ್ವಿತೀಯ ಪಿಯು ವಿದ್ಯಾರ್ಥಿ ಆತ್ಮಹತ್ಯೆ

Published:
Updated:

ಬೆಂಗಳೂರು: ಬಿನ್ನಿಮಿಲ್‌ ಸಮೀಪದ ಇ.ಟಿ.ಎ ಗಾರ್ಡನ್‌ನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿ ಅದ್ವೈತ್ (17) ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳೀಯ ಉದ್ಯಮಿ ಸಂತೋಷ್ ಅಯ್ಯರ್ ಮಗನಾಗಿದ್ದ ಆತ, ಖಾಸಗಿ ಕಾಲೇಜೊಂದರಲ್ಲಿ ಓದುತ್ತಿದ್ದ. ಮನೆಯ ತನ್ನ ಕೊಠಡಿಯಲ್ಲಿ ಲೆದರ್ ಬೆಲ್ಟ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಅಜ್ಜಿ ಕೊಠಡಿಗೆ ಬಂದಾಗ ವಿಷಯ ಗೊತ್ತಾಗಿದೆ.

‘ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಪಡೆದಿದ್ದ ಅದ್ವೈತ್‌, ವಾಣಿಜ್ಯ ವಿಷಯದಲ್ಲಿ ಓದುವ ಇಚ್ಛೆ ವ್ಯಕ್ತಪಡಿಸಿದ್ದ. ತಂದೆಯು ವಿಜ್ಞಾನ ವಿಭಾಗಕ್ಕೆ ಸೇರಿಸಿದ್ದರು. ಮೊದಲ ವರ್ಷದಲ್ಲಿ ಕಡಿಮೆ ಅಂಕ ಗಳಿಸಿದ್ದ ಆತನಿಗೆ ದ್ವಿತೀಯ ವರ್ಷದಲ್ಲಿ ಅಧ್ಯಯನ ಕಷ್ಟವಾಗಿತ್ತು. ಈ ಬಗ್ಗೆ ತಂದೆಗೂ ಹೇಳಿದ್ದ. ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದೆ’ ಎಂದು ಕೆ.ಪಿ.ಅಗ್ರಹಾರ ಪೊಲೀಸರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry