ಸಾಮಾಜಿಕ ಮಾಧ್ಯಮದಲ್ಲಿ ಅನಂತಕುಮಾರ್ ಹೆಗಡೆಗೆ ನಿಂದನೆ ಆರೋಪ: ದೂರು ದಾಖಲು

7

ಸಾಮಾಜಿಕ ಮಾಧ್ಯಮದಲ್ಲಿ ಅನಂತಕುಮಾರ್ ಹೆಗಡೆಗೆ ನಿಂದನೆ ಆರೋಪ: ದೂರು ದಾಖಲು

Published:
Updated:
ಸಾಮಾಜಿಕ ಮಾಧ್ಯಮದಲ್ಲಿ ಅನಂತಕುಮಾರ್ ಹೆಗಡೆಗೆ ನಿಂದನೆ ಆರೋಪ: ದೂರು ದಾಖಲು

ಶಿರಸಿ: ಫೇಸ್‌ಬುಕ್‌ನಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ಆಪ್ತ ಸಹಾಯಕ ಸುರೇಶ ಶೆಟ್ಟಿ ಇಲ್ಲಿನ ಮಾರುಕಟ್ಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉರುಳಿಸಿ ಶಿವಾಜಿ ಪ್ರತಿಮೆ ಸ್ಥಾಪಿಸುತ್ತೇನೆಂದು ಅನಂತಕುಮಾರ್ ಹೆಗಡೆ ಹೇಳಿಕೆ ನೀಡಿರುವುದಾಗಿ ಆರೋಪಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಲಾಗಿದೆ.

ಪ್ರಜಾಕೀಯ ಸಪೋರ್ಟ್ಸ್‌ ಎನ್ನುವ ಫೇಸ್‌ಬುಕ್ ಪುಟದಲ್ಲಿ ಅನಂತಕುಮಾರ್ ಹೆಗಡೆ ಅವರನ್ನು ನಿಂದಿಸಲಾಗಿದೆಎಂದು ಸುರೇಶ ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ.

ಇಂತಹ ಹೇಳಿಕೆಯನ್ನು ಸಚಿವರು ಎಲ್ಲಿಯೂ ನೀಡಿಲ್ಲ. ಆದರೆ ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ಹೆಸರು ಕೆಡಿಸಲು ಕೆಲವರು ಪ್ರಯತ್ನಿಸುತ್ತಿದ್ದು,  ಕ್ರಮ‌ಕೈಗೊಳ್ಳುವಂತೆ ಅವರು ವಿನಂತಿಸಿದ್ದಾರೆ.

ಪ್ರಜಾಕೀಯ ಹಾಗೂ ಮಂಜು ಪವರ್ ಸ್ಟಾರ್ ಎನ್ನುವ ಎರಡು ಫೇಸ್‌ಬುಕ್‌ ಖಾತೆಗಳ ವಿರುದ್ಧ ದೂರು ನೀಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry