ಎನ್.ಶಂಕರಪ್ಪ ರಾಜ್ಯಸಭೆ ಬಿಜೆಪಿ ಅಭ್ಯರ್ಥಿ?

7

ಎನ್.ಶಂಕರಪ್ಪ ರಾಜ್ಯಸಭೆ ಬಿಜೆಪಿ ಅಭ್ಯರ್ಥಿ?

Published:
Updated:
ಎನ್.ಶಂಕರಪ್ಪ ರಾಜ್ಯಸಭೆ ಬಿಜೆಪಿ ಅಭ್ಯರ್ಥಿ?

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಮಾ.23ರಂದು ನಡೆಯುವ ಚುನಾವಣೆಯಲ್ಲಿ ರಾಯಚೂರಿನ ಎನ್.ಶಂಕರಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ.

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ತನಗಿರುವ ಶಾಸಕ ಬಲದ ಆಧಾರದಲ್ಲಿ ಒಂದು ಸ್ಥಾನವನ್ನು ಗೆಲ್ಲಲು ಅವಕಾಶವಿದೆ.

ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿರುವ ಶಂಕರಪ್ಪ ರಾಜ್ಯಸಭೆ ಅಭ್ಯರ್ಥಿಯಾಗಿರುವ ಕುರಿತು ಬಿಜೆಪಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. 

ವೃತ್ತಿಯಲ್ಲಿ ವಕೀಲರಾಗಿರುವ ಶಂಕರಪ್ಪ ಮಡಿವಾಳ ಸಮುದಾಯಕ್ಕೆ ಸೇರಿದವರಾಗಿದ್ದು, ವಿಧಾನಪರಿಷತ್‌ ಮಾಜಿ ಸದಸ್ಯರಾಗಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry