ಪರಮೇಶ್ವರ್ ಗೆಲ್ಲಲೇಬೇಕು: ಸಿದ್ದರಾಮಯ್ಯ

7

ಪರಮೇಶ್ವರ್ ಗೆಲ್ಲಲೇಬೇಕು: ಸಿದ್ದರಾಮಯ್ಯ

Published:
Updated:
ಪರಮೇಶ್ವರ್ ಗೆಲ್ಲಲೇಬೇಕು: ಸಿದ್ದರಾಮಯ್ಯ

ಕೊರಟಗೆರೆ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಈ ಬಾರಿ ಗೆಲ್ಲಲೇಬೇಕು. ಪರಮೇಶ್ವರ್ ಗೆದ್ದರೆ ರಾಹುಲ್ ಗಾಂಧಿ ಗೆದ್ದ ಹಾಗೆ. ರಾಹುಲ್ ಗಾಂಧಿ ಗೆದ್ದರೆ ನಾನು ಗೆದ್ದ ಹಾಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯಾವುದೇ ಕಾರಣಕ್ಕೂ ಪರಮೇಶ್ವರ್ ಸೋಲಬಾರದು. ಏಳು ವರ್ಷ ನಮ್ಮ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ನಾನು ಮತ್ತು ಪರಮೇಶ್ಚರ್ ಅಣ್ಣ–ತಮ್ಮಂದಿರಂತೆ ಇದ್ದೇವೆ. ಒಂದೇ ಒಂದು ಭಿನ್ನಾಭಿಪ್ರಾಯ ಇಲ್ಲ. ಯಾರೊ ಸುಮ್ಮನೆ ನಮ್ಮಿಬ್ಬರಲ್ಲಿ ಭಿನ್ನಾಭಿಪ್ರಾಯವಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಅಂತಹದ್ದು ಯಾವುದೂ ಇಲ್ಲ. ಅಭ್ಯರ್ಥಿಗಳ ಆಯ್ಕೆಯಲ್ಲಿ, ಮಂತ್ರಿಮಂಡಲ ರಚನೆ ಹೀಗೆ ಯಾವುದೇ ವಿಷಯದಲ್ಲಿ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.

ಸೂರ್ಯ ಹುಟ್ಟುವುದು ಎಷ್ಟು ಸತ್ಯವೊ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದರು.

ಖರ್ಗೆಯವರ ಜತೆ ಮಾತಾಡುತ್ತೇನೆ..

ಖೇಣಿ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡಿರುವ ಬಗ್ಗೆ ಖರ್ಗೆ ಅವರು ಏನು ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಅವರೊಂದಿಗೆ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೊರಟಗೆರೆಯಲ್ಲಿ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry