ಸೆಲ್ಫಿ ಕ್ಲಿಕ್ಕಿಸಿ ಫೇಸ್‌ಬುಕ್ಕಿಗೆ ಹಾಕಿದ ಕೈದಿಗಳು

7

ಸೆಲ್ಫಿ ಕ್ಲಿಕ್ಕಿಸಿ ಫೇಸ್‌ಬುಕ್ಕಿಗೆ ಹಾಕಿದ ಕೈದಿಗಳು

Published:
Updated:

ಮುಜಫ್ಫರ್‌ನಗರ: ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿನ ಮೂವರು ವಿಚಾರಣಾಧೀನ ಕೈದಿಗಳು ಜೈಲಿನ ಆವರಣದಲ್ಲಿಯೇ ಸೆಲ್ಫಿ ಕ್ಲಿಕ್ಕಿಸಿಕೊಂಡು ಫೇಸ್‌ಬುಕ್‌ಗೆ ಹಾಕಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಛಾಯಾಚಿತ್ರ ತೆಗೆಯಲು ಬಳಸಿದ್ದ ಸ್ಮಾರ್ಟ್‌ಫೋನ್‌ ಅನ್ನು ಶನಿವಾರ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಘಟನೆಯ ಕುರಿತು ಪ್ರಕರಣ ದಾಖಲಿಸಲಾಗಿದೆ.

ಕೊಲೆ  ಪ್ರಕರಣದಲ್ಲಿ ಈ ಮೂವರೂ ಜೈಲುವಾಸ ಅನುಭವಿಸುತ್ತಿದ್ದಾರೆ ಎಂದು ಜೈಲಿನ ಅಧೀಕ್ಷಕ ಹೇಳಿದ್ದಾರೆ. ಕೆಲವು ದಿನಗಳ ಹಿಂದೆ, ಜೈಲಿನಲ್ಲಿರುವ ತನ್ನ ಕಕ್ಷಿದಾರನಿಗೆ ಮೊಬೈಲ್ ಫೋನ್ ನೀಡಿದ್ದ ವಕೀಲನನ್ನು ಬಂಧಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry