ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದರೆ; ಅದು ಐಪಿಎಸ್‌ ಅಧಿಕಾರಿಗಳ ಬಂಡಾಯವೇ: ಸಿದ್ದರಾಮಯ್ಯ ಪ್ರಶ್ನೆ

Last Updated 12 ಮಾರ್ಚ್ 2018, 9:38 IST
ಅಕ್ಷರ ಗಾತ್ರ

ಕೂಡಲಸಂಗಮ: 'ಮುಖ್ಯ ಕಾರ್ಯದರ್ಶಿಗೆ ಅಧಿಕಾರಿಯೊಬ್ಬರು ಪತ್ರ ಬರೆದರೆ ಅದನ್ನು ಐಪಿಎಸ್ ಅಧಿಕಾರಿಗಳ ಬಂಡಾಯವೆಂದು ಪರಿಗಣಿಸಬೇಕೇ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಮಾಧ್ಯಮದವರಿಗೆ ಮರುಪ್ರಶ್ನೆ ಹಾಕಿದರು.

ಹುನಗುಂದ ತಾಲ್ಲೂಕಿನ ಕೂಡಲಸಂಗಮ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಅಧಿಕಾರಿ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಆದರೆ, ಅಧಿಕಾರಿಗಳ ದೈನಂದಿನ ಕರ್ತವ್ಯ ನಿರ್ವಹಣೆ ವೇಳೆ ಸಂಪುಟದ ಸಹೊದ್ಯೋಗಿಗಳಾಗಲಿ, ಪಕ್ಷದ ಶಾಸಕರಾಗಲಿ ಹಸ್ತಕ್ಷೇಪ ಮಾಡಿಲ್ಲ ಎಂದರು.

ರಾಜಕೀಯ ಹಸ್ತಕ್ಷೇಪದಿಂದಾಗಿ ಪೊಲೀಸ್‌ ವ್ಯವಸ್ಥೆಯೇ ಸರಿ ಇಲ್ಲ ಎಂಬ ಭಾವನೆ ಮೂಡುವಂತಾಗಿದೆ ಎಂದು ಕರ್ನಾಟಕ ಐಪಿಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಹಾಗೂ ಎಡಿಜಿಪಿ ಆರ್‌.ಪಿ. ಶರ್ಮಾ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT