ಭಾರತ ಮಹಿಳಾ ತಂಡದ ವಿರುದ್ಧ ಆಸ್ಟ್ರೇಲಿಯಾಕ್ಕೆ ಎಂಟು ವಿಕೆಟ್‌ ಜಯ

7

ಭಾರತ ಮಹಿಳಾ ತಂಡದ ವಿರುದ್ಧ ಆಸ್ಟ್ರೇಲಿಯಾಕ್ಕೆ ಎಂಟು ವಿಕೆಟ್‌ ಜಯ

Published:
Updated:
ಭಾರತ ಮಹಿಳಾ ತಂಡದ ವಿರುದ್ಧ ಆಸ್ಟ್ರೇಲಿಯಾಕ್ಕೆ ಎಂಟು ವಿಕೆಟ್‌ ಜಯ

ವಡೋದರ: ಇಲ್ಲಿನ ರಿಲಯನ್ಸ್‌ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯ ಮೊದಲ ಹಣಾಹಣಿಯಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಬಲಿಷ್ಠ ಆಸ್ಟ್ರೇಲಿಯಾ ತಂಡದ ಎದುರು ಸೋಲು ಅನುಭವಿಸಿದೆ.

ಆಸ್ಟ್ರೇಲಿಯಾ ವಿರುದ್ಧ ಟಾಸ್‌ ಗೆದ್ದ ಭಾರತ ಮಹಿಳಾ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು.

ಭಾರತ 50 ಓವರ್‌ಗಳಲ್ಲಿ 200 ರನ್‌ ಗಳಿಸಿ ಆಲೌಟ್‌ ಆಯಿತು. ಸಾಧಾರಣ ಮೊತ್ತ ಬೆನ್ನತ್ತಿದ ಆಸ್ಟ್ರೇಲಿಯಾ ನಿಕೊಲೆ ಬೋಲ್ಟನ್‌ ಶತಕದ ಬಲದಿಂದ 32.1 ಓವರ್‌ಗಳಲ್ಲಿ ಗೆಲುವಿನ ನಗೆ ಬೀರಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry