ಮಾರ್ಚ್‌ 13, 14ರಂದು ಕೇರಳ, ಲಕ್ಷದ್ವೀಪ ಕರಾವಳಿಯಲ್ಲಿ ಭಾರಿ ಮಳೆ

7

ಮಾರ್ಚ್‌ 13, 14ರಂದು ಕೇರಳ, ಲಕ್ಷದ್ವೀಪ ಕರಾವಳಿಯಲ್ಲಿ ಭಾರಿ ಮಳೆ

Published:
Updated:
ಮಾರ್ಚ್‌ 13, 14ರಂದು ಕೇರಳ, ಲಕ್ಷದ್ವೀಪ ಕರಾವಳಿಯಲ್ಲಿ ಭಾರಿ ಮಳೆ

‌ತಿರುವನಂತಪುರಂ: ‘ಮುಂದಿನ ಎರಡು ದಿನಗಳಲ್ಲಿ ಕೇರಳ ಹಾಗೂ ಲಕ್ಷದ್ವೀಪ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದ್ದು, ಇದು ಅರಬ್ಬೀ ಸಮುದ್ರದ ಆಗ್ನೇಯ ಭಾಗ ಮಾಲ್ಡೀವ್ಸ್‌ ಕರಾವಳಿ ಕಡೆಗೂ ವ್ಯಾಪಿಸಲಿದೆ’ ಎಂದು ಹವಾಮಾನ ಇಲಾಖೆ ಸೋಮವಾರ ಎಚ್ಚರಿಕೆ ನೀಡಿದೆ.

‘ಮಾರ್ಚ್‌ 13ರಂದು ಕೇರಳದ ಕೆಲವು ಪ್ರದೇಶಗಳಲ್ಲಿ ಮಳೆ, ಗುಡುಗು–ಮಿಂಚಿನೊಂದಿಗೆ ಮೋಡಕವಿದ ವಾತಾವರಣ ಇರಲಿದ್ದು, 14ಕ್ಕೆ ಸಂಪೂರ್ಣ ದಕ್ಷಿಣ ಕೇರಳ ಹಾಗೂ ಲಕ್ಷದ್ವೀಪದಲ್ಲಿ ಮಳೆ ಆವರಿಸಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸಂಬಂಧ ಹವಾಮಾನ ಇಲಾಖೆಯ ರಾಜ್ಯ ಮುಖ್ಯ ಕಾರ್ಯದರ್ಶಿ ಕಚೇರಿಯಲ್ಲಿ ಸೋಮವಾರ ‌ರಾಜ್ಯ ವಿಪತ್ತು ನಿರ್ವಹಣೆ ಆಡಳಿತಾಧಿಕಾರಿಗಳ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯ ಬಳಿಕ ಕರಾವಳಿ ಜಿಲ್ಲೆಗಳಲ್ಲಿ ಮುಂಜಾಗ್ರತೆ ವಹಿಸುವಂತೆ ಸ್ಥಳೀಯ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ದಕ್ಷಿಣ ತಮಿಳುನಾಡು ಹಾಗೂ ಕೇರಳ ಕರಾವಳಿಯಲ್ಲಿ ಮಾರ್ಚ್‌ 15ರ ವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸಲಹೆ ನೀಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry