ಕಂಬಳ: ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥ

7

ಕಂಬಳ: ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥ

Published:
Updated:
ಕಂಬಳ: ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ಇತ್ಯರ್ಥ

ನವದೆಹಲಿ: ರಾಜ್ಯದ ಕರಾವಳಿ ಭಾಗದ ಜನಪ್ರಿಯ ಕ್ರೀಡೆಯಾದ ಕಂಬಳಕ್ಕೆ ಅನುಮತಿ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಸ್ವಯಂ ಸೇವಾ ಸಂಸ್ಥೆ ಪೆಟಾ ಇಂಡಿಯಾ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಸೋಮವಾರ ಇತ್ಯರ್ಥಪಡಿಸಿತು.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು ಪ್ರಕರಣವನ್ನು ಇತ್ಯರ್ಥಪಡಿಸಿ ಆದೇಶ ನೀಡಿತು. ಅಲ್ಲದೆ,  ಕಂಬಳಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ಸರ್ಕಾರ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ್ದನ್ನೇ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅರ್ಜಿದಾರರಿಗೆ ಅವಕಾಶ ಇದೆ ಎಂದೂ ನ್ಯಾಯಪೀಠ ತಿಳಿಸಿತು.

ಕಂಬಳಕ್ಕೆ ಅನುಮತಿ ನೀಡಲು ರಾಜ್ಯ ಸರ್ಕಾರ ಕರ್ನಾಟಕ ಪ್ರಾಣಿ ಹಿಂಸೆ ಕಾಯ್ದೆಗೆ ತಿದ್ದುಪಡಿ ತಂದಿದ್ದು, ರಾಷ್ಟ್ರಪತಿ ಅಂಕಿತ ದೊರೆತಿದೆ. ಈ ತಿದ್ದುಪಡಿ ಕಾಯ್ದೆ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ಕಂಬಳಕ್ಕೆ ಅವಕಾಶ ನೀಡಿದ್ದ ಸುಗ್ರೀವಾಜ್ಞೆ ಈಗಾಗಲೇ ಅನೂರ್ಜಿತವಾಗಿದ್ದು, ಅದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಮಹತ್ವ ಕಳೆದುಕೊಂಡಿದೆ ಎಂದು ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ದೇವದತ್ತ ಕಾಮತ್ ವಿವರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry