ಸೈಬರ್‌ ಕ್ರೈಂ: ಆರೇ ತಿಂಗಳಿನಲ್ಲಿ 1,951 ಪ್ರಕರಣ

7

ಸೈಬರ್‌ ಕ್ರೈಂ: ಆರೇ ತಿಂಗಳಿನಲ್ಲಿ 1,951 ಪ್ರಕರಣ

Published:
Updated:

ಬೆಂಗಳೂರು: ನಗರದಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, 2017ರ ಆಗಸ್ಟ್‌ನಿಂದ 2018ರ ಜನವರಿವರೆಗೆ 1,951 ಪ್ರಕರಣಗಳು ದಾಖಲಾಗಿವೆ.

ಪೊಲೀಸ್ ಕಮಿಷನರ್‌ ಕಚೇರಿ ಬಳಿ ಸೈಬರ್‌ ಕ್ರೈಂ ಠಾಣೆ ತೆರೆಯಲಾಗಿದೆ. ಬ್ಯಾಂಕ್‌ ಖಾತೆಗೆ ಕನ್ನ, ಆನ್‌ಲೈನ್‌ ವಂಚನೆಗೆ ಸಂಬಂಧಪಟ್ಟಂತೆ ನಿತ್ಯವೂ 15ರಿಂದ 20 ಪ್ರಕರಣಗಳು ದಾಖಲಾಗುತ್ತಿವೆ. ಈ ಠಾಣೆಯಲ್ಲಿ ಇನ್‌ಸ್ಪೆಕ್ಟರ್‌  ಸೇರಿ 10 ಸಿಬ್ಬಂದಿ ಮಾತ್ರ ಇದ್ದಾರೆ. ಹೀಗಾಗಿ, ಪ್ರಕರಣಗಳ ತನಿಖೆ ಸಮರ್ಪಕವಾಗಿ ಆಗುತ್ತಿಲ್ಲ.

ಸಿಐಡಿ ಕಚೇರಿಯಲ್ಲೂ 2001ರಲ್ಲಿ ಸೈಬರ್‌ ಕ್ರೈಂ ವಿಭಾಗ ತೆರೆಯಲಾಗಿದೆ. ಅಲ್ಲಿಯೂ ಹೆಚ್ಚಿನ ದೂರುಗಳು ದಾಖಲಾಗುತ್ತಿವೆ. ಇದುವರೆಗೂ ಒಂದು ಪ್ರಕರಣದಲ್ಲೂ ಆರೋಪಿಗಳಿಗೆ ಶಿಕ್ಷೆ ಆಗಿಲ್ಲ.

‘ದೂರುಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ, ಪೊಲೀಸರು ಅವುಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಆರೋಪಿಗಳನ್ನು ಹುಡುಕುವ ಯತ್ನವನ್ನೂ ಮಾಡುತ್ತಿಲ್ಲ. ಇದು ಆರೋಪಿಗಳಿಗೆ ಮತ್ತಷ್ಟು ಅನುಕೂಲ ಮಾಡಿಕೊಟ್ಟಿದೆ’ ಎಂದು ದೂರುದಾರರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry