ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯಾನದ ಕಾಮಗಾರಿ ಕಳಪೆ

Last Updated 12 ಮಾರ್ಚ್ 2018, 20:23 IST
ಅಕ್ಷರ ಗಾತ್ರ

ಬೆಂಗಳೂರು: ಮಹದೇವಪುರ ಕ್ಷೇತ್ರದ ದೊಡ್ಡಗುಬ್ಬಿ ಗ್ರಾಮದಲ್ಲಿ ₹60 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿರುವ ನೂತನ ಉದ್ಯಾನದ ಕಾಮಗಾರಿ ಕಳಪೆಯಾಗಿದೆ.

ಎರಡು ವರ್ಷಗಳಿಂದ ಕಾಮಗಾರಿ ನಡೆಯುತ್ತಿದೆ.‌ ನಡಿಗೆ ಪಥದಲ್ಲಿ ಅಳವಡಿಸಿರುವ ಸಿಮೆಂಟ್‌ ಬ್ರಿಕ್ಸ್‌ಗಳು ಕಿತ್ತುಹೋಗಿವೆ. ಇಲ್ಲೇ ಇರುವ ತಡೆಗೋಡೆ ಕುಸಿದು ಬಿದ್ದಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮ ಪಂಚಾಯಿತಿ ಸದಸ್ಯೆ ಆರ್.ಶಾಂತಮ್ಮ ದೂರಿದರು.

ಗ್ರಾಮದ ನಿವಾಸಿ ಕವಿತಾ, ‘ಊರಿನ ಮಧ್ಯ ಭಾಗದಲ್ಲಿ ಉದ್ಯಾನ ನಿರ್ಮಿಸುವ ಬದಲಿಗೆ ಹೊರಗೆ ನಿರ್ಮಿಸಲಾಗುತ್ತಿದೆ. ಇದು ಅನೈತಿಕ ಚಟುವಟಿಕೆಯ ತಾಣವಾಗಿ ಮಾರ್ಪಟ್ಟಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸುಬ್ರಮಣ್ಯ, ‘ಉದ್ಯಾನದ ಕಾಮಗಾರಿಯನ್ನುತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT