7

ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

Published:
Updated:

ಬೆಂಗಳೂರು:  ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ಜನ ವಿರೋಧಿ ನೀತಿಗಳನ್ನು ವಿರೋಧಿಸಿ ಇದೇ 15ರಂದು ದೇಶ ವ್ಯಾಪಿ ಪ್ರತಿಭಟನೆ ನಡೆಸಲು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನಿರ್ಧರಿಸಿದೆ.

ಸೋಮವಾರ ಪತ್ರಿಕಾಗೋ ಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡ ಎಚ್‌.ವಿ. ಅನಂತ ಸುಬ್ಬರಾವ್, ‘ರಕ್ಷಣಾ ವಲಯದ ಕಾರ್ಮಿಕ ಸಂಘಟನೆಗಳ ನೌಕರರು, ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಹಲವು ಭಾರಿ ಪ್ರತಿಭಟಿಸಿದ್ದಾರೆ. ಇದರ ಮುಂದುವರೆದ ಭಾಗವಾಗಿ ರಕ್ಷಣಾ ಉತ್ಪಾದನಾ ವಲಯದ ಕಾರ್ಖಾನೆಗಳ ಕಾರ್ಮಿಕರು ದೇಶ ವ್ಯಾಪಿ ಒಂದು ದಿನದ ಮುಷ್ಕರ ನಡೆಸಲಿದ್ದಾರೆ’ ಎಂದು ತಿಳಿಸಿದರು.

ಸಾರ್ವಜನಿಕ ಪಡಿತರ ವ್ಯವಸ್ಥೆ ಯನ್ನು ಸಾರ್ವತ್ರೀಕರಣಗೊಳಿಸಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಹೊಸ ಉದ್ಯೋಗ ಸೃಷ್ಠಿಸಲು ಕ್ರಮಕೈಗೊಳ್ಳಬೇಕು. ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕಾನೂನು ಉಲ್ಲಂಘಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ದೇಶದ ಎಲ್ಲಾ ಕಾರ್ಮಿಕರಿಗೂ ಸಾಮಾಜಿಕ ಭದ್ರತೆ ಒದಗಿಸಬೇಕಿದೆ ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry