ವಿಜಯ ಸಂಕೇಶ್ವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

ಮಂಗಳವಾರ, ಮಾರ್ಚ್ 26, 2019
33 °C

ವಿಜಯ ಸಂಕೇಶ್ವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

Published:
Updated:
ವಿಜಯ ಸಂಕೇಶ್ವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

ಹಾವೇರಿ: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಮುಖ್ಯಮಂತ್ರಿ ನಾಟಕ ಮಾಡುತ್ತಿದ್ದಾರೆ ಎಂಬುದು ಉದ್ಯಮಿ ವಿಜಯ ಸಂಕೇಶ್ವರ ಅವರ ಬೇಜವಾಬ್ದಾರಿ ಹಾಗೂ ಆಧಾರರಹಿತ ಹೇಳಿಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರತ್ಯೇಕ ಲಿಂಗಾಯತ ಧರ್ಮ ಕುರಿತು ನಾಳಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದೂ ಅವರು ಹೇಳಿದರು.

ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲ್ಲೂಕಿನ ಅಸುಂಡಿ ಮತ್ತು 17 ಕೆರೆಗಳನ್ನು ತುಂಬಿಸುವ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿಧಾನ ಸಭಾಧ್ಯಕ್ಷ ಕೆ. ಬಿ. ಕೋಳಿವಾಡ, ಸಚಿವ ರುದ್ರಪ್ಪ ಲಮಾಣಿ, ಶಾಸಕ ಬಸವರಾಜ ಶಿವಣ್ಣವರ ಇದ್ದರು.

‘ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಹಾಕಿರುವ ಷರತ್ತುಗಳ ಕುರಿತು ನಿಮ್ಮ ಸಂಸದರು ಹಾಗೂ ಪ್ರಧಾನಿಗಳ ಬಳಿ ಪ್ರಶ್ನಿಸಿ’ ಎಂದು ಸುದ್ದಿಗಾರರ ಪ್ರಶ್ನೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಇವನ್ನೂ ಓದಿ...

ರಾಜ್ಯಸಭಾ ಟಿಕೆಟ್ ತಪ್ಪಿದ್ದರಿಂದ ಅಸಮಾಧಾನವಿಲ್ಲ: ವಿಜಯ ಸಂಕೇಶ್ವರ

ವಿಜಯ ಸಂಕೇಶ್ವರ ಕಾಂಗ್ರೆಸ್‌ಗೆ ಬಂದರೆ ಸ್ವಾಗತ: ಸಚಿವ ರಾಯರಡ್ಡಿ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry