ಲಿಂಗಾಯತ ಧರ್ಮ ಶಿಫಾರಸಿಗೆ ಒತ್ತಾಯ

7
ಜಾಗತಿಕ ಲಿಂಗಾಯತ ಮಹಾಸಭಾ ಪ್ರತಿಭಟನೆ

ಲಿಂಗಾಯತ ಧರ್ಮ ಶಿಫಾರಸಿಗೆ ಒತ್ತಾಯ

Published:
Updated:

ಸಿಂಧನೂರು: ಲಿಂಗಾಯತ ಸ್ವತಂತ್ರ ಧರ್ಮ ಕುರಿತು ನ್ಯಾ.ನಾಗಮೋಹನ ದಾಸ್‌ ನೇತೃತ್ವದ ಸಮಿತಿಯ ವರದಿಯನ್ನು ರಾಜ್ಯ ಸರ್ಕಾರ ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಜಾಗತಿಕ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು.

ಇಲ್ಲಿನ ಬಸವೇಶ್ವರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯು ಬಸ್ ನಿಲ್ದಾಣ, ಮಹಾತ್ಮಗಾಂಧಿ ವೃತ್ತದ ಮೂಲಕ ಮಿನಿವಿಧಾನಸೌಧ ಕಚೇರಿಗೆ ತಲುಪಿತು. ಮೆರವಣಿಗೆಯುದ್ದಕ್ಕೂ ಲಿಂಗಾಯತ ಪ್ರತ್ಯೇಕ ಧರ್ಮ ವಿರೋಧಿಸುವವರ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry