ಎಸ್‌ಪಿ ವರ್ಗಾವಣೆ

ಮಂಗಳವಾರ, ಮಾರ್ಚ್ 19, 2019
33 °C

ಎಸ್‌ಪಿ ವರ್ಗಾವಣೆ

Published:
Updated:
ಎಸ್‌ಪಿ ವರ್ಗಾವಣೆ

ಕೊಪ್ಪಳ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅನೂಪ್‌ ಎ.ಶೆಟ್ಟಿ ಅವರನ್ನು 8 ತಿಂಗಳಲ್ಲೇ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅವರನ್ನು ರಾಜ್ಯ ಗುಪ್ತದಳದ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಅನೂಪ್‌ ಶೆಟ್ಟಿ ಜಿಲ್ಲೆಗೆ ಬಂದ ಕೆಲವೇ ಸಮಯದಲ್ಲಿ ಅಕ್ರಮ ಮರಳುಗಾರಿಕೆ, ಮದ್ಯ ಮಾರಾಟ, ಕೋಮು ಗಲಭೆಯಂಥ ಸೂಕ್ಷ್ಮ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಿ ಶ್ಲಾಘನೆಗೆ ಪಾತ್ರವಾಗಿದ್ದರು. ಅವರ ವರ್ಗಾವಣೆಗೆ ರಾಜಕೀಯ ಒತ್ತಡವೇ ಕಾರಣ ಎಂಬ ಮಾತೂ ಕೇಳಿಬಂದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry