ಆಧಾರ್ ಜೋಡಣೆಯ ಗಡುವು ವಿಸ್ತರಿಸಿದ ಸುಪ್ರೀಂ

ನವದೆಹಲಿ: ಬ್ಯಾಂಕ್ ಖಾತೆ, ಮೊಬೈಲ್ ಸಿಮ್ ಸೇರಿ ವಿವಿಧ ಸೇವೆಗಳಿಗೆ ಆಧಾರ್ ಜೋಡಣೆ ಮಾಡಲು ಮಾರ್ಚ್ 31ರವರೆಗೆ ನಿಗದಿಪಡಿಸಿದ್ದ ಗಡುವನ್ನು ಸುಪ್ರೀಂ ಕೋರ್ಟ್ ಅನಿರ್ದಿಷ್ಟಾವಧಿಗೆ ವಿಸ್ತರಿಸಿದೆ.
ಮುಂದಿನ ಆದೇಶದ ವರೆಗೂ ಆಧಾರ್ ಜೋಡಣೆ ಗಡುವು ಮುಂದೂಡಿ ಮಂಗಳವಾರ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಸಮಾಜ ಕಲ್ಯಾಣ ಕಾರ್ಯಕ್ರಮಗಳ ಅಡಿ ಸರ್ಕಾರದಿಂದ ಪಡೆಯುವ ಸವಲತ್ತುಗಳಿಗೆ ಆಧಾರ್ ಕಡ್ಡಾಯ ಎಂದು ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಹೇಳಿದೆ.
ಆಧಾರ್ ಕಡ್ಡಾಯ ಬಳಕೆ ಪ್ರಶ್ನಿಸಿ ದಾಖಲಾಗಿರುವ ದೂರಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ.
ಇನ್ನಷ್ಟು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.