ವರದಿ ಜಾರಿಗೊಳಿಸಿ

7

ವರದಿ ಜಾರಿಗೊಳಿಸಿ

Published:
Updated:

ನಾಸಿಕ್‌ನಿಂದ ಮುಂಬೈವರೆಗೆ ಪಾದಯಾತ್ರೆ ನಡೆಸಿದ ರೈತರ ಹೋರಾಟಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರವು ಅವರ ಬೇಡಿಕೆಗಳನ್ನು ಈಡೇರಿಸುವುದಾಗಿ ಲಿಖಿತ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ. ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸುವುದು ಸಹ ಈ ರೈತರು ಮುಂದಿಟ್ಟ ಬೇಡಿಕೆಗಳಲ್ಲಿ ಒಂದು.

ಸ್ವಾಮಿನಾಥನ್‌ ಆಯೋಗವು ರೈತರ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಅಧ್ಯಯನ ನಡೆಸಿ, ಅವರ ಸಮಸ್ಯೆಗಳನ್ನು ಹೇಗೆ ನಿವಾರಿಸಬಹುದು ಎಂಬ ಬಗ್ಗೆ ವೈಜ್ಞಾನಿಕ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡಿದೆ. ಆದರೆ ಈ ವರದಿಯನ್ನು ಜಾರಿ ಮಾಡಲು ಹಲವು ರಾಜ್ಯ ಸರ್ಕಾರಗಳು ಕಷ್ಟಪಡುತ್ತಿವೆ.

ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳ ರೈತರು ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಹೋರಾಟ ನಡೆಸುತ್ತಾ ಬಂದಿದ್ದಾರೆ. ಮಹಾರಾಷ್ಟ್ರ ಸರ್ಕಾರ ಈ ವರದಿಯನ್ನು ಜಾರಿಗೊಳಿಸಲು ಒಪ್ಪಿರುವುದು ಒಳ್ಳೆಯ ನಡೆ. ಅದರಂತೆ ಕರ್ನಾಟಕ ಸರ್ಕಾರವೂ ಸ್ವಾಮಿನಾಥನ್ ವರದಿ ಜಾರಿಗೊಳಿಸಲು ಕ್ರಮ ಕೈಗೊಂಡು, ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಸರಣಿಯನ್ನು ತಡೆಯಬೇಕು.

ರಮೇಶ ವಿ., ಬೆಂಗಳೂರು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry