ಹೈ.ಕ. ಅಭಿವೃದ್ಧಿಗೆ ಕೇಂದ್ರವೂ ಅನುದಾನ ನೀಡಲಿ: ರಾಯರಡ್ಡಿ

7

ಹೈ.ಕ. ಅಭಿವೃದ್ಧಿಗೆ ಕೇಂದ್ರವೂ ಅನುದಾನ ನೀಡಲಿ: ರಾಯರಡ್ಡಿ

Published:
Updated:

ಕಲಬುರ್ಗಿ: ‘ಹೈದರಾಬಾದ್‌ ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಸರ್ಕಾರವೂ ಅನುದಾನ ನೀಡಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಆಗ್ರಹಿಸಿದರು.

ಹೈದರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ‘ಈ ಪ್ರದೇಶ ಹಿಂದುಳಿದಿದೆ ಎಂಬ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರವು ಸಂವಿಧಾನಕ್ಕೆ ತಿದ್ದುಪಡಿ ತಂದು ವಿಶೇಷ ಸ್ಥಾನಮಾನ ನೀಡಿದೆ. ಆದ್ದರಿಂದ ಶೇ 50ರಷ್ಟು ಅನುದಾನ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ. ನಾವು ಕೋರಿಕೆ ಸಲ್ಲಿಸುತ್ತೇವೆ’ ಎಂದರು.

ಸೇರ್ಪಡೆ ಇಲ್ಲ:

‘ಹೈದರಾಬಾದ್‌ ಕರ್ನಾಟಕ ಪ್ರದೇಶದ 371 (ಜೆ) ಮೀಸಲಾತಿ ವ್ಯಾಪ್ತಿಗೆ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಮಾತ್ರ ಸೇರಿಸಲು ನಿರ್ಧರಿಸಲಾಗಿದೆ. ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಆರು ಗ್ರಾಮಗಳ ಸೇರ್ಪಡೆಯ ಬೇಡಿಕೆಯನ್ನು ಸಚಿವ ಸಂಪುಟ ತಿರಸ್ಕರಿಸಿದೆ’ ಎಂದು ರಾಯರಡ್ಡಿ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry