ಗೌರಿ ಹತ್ಯೆ: ಬಂಧಿತನ ಮಾಹಿತಿ ಪಡೆದ ಮಹಾರಾಷ್ಟ್ರ ಎಸ್‌ಐಟಿ

7

ಗೌರಿ ಹತ್ಯೆ: ಬಂಧಿತನ ಮಾಹಿತಿ ಪಡೆದ ಮಹಾರಾಷ್ಟ್ರ ಎಸ್‌ಐಟಿ

Published:
Updated:
ಗೌರಿ ಹತ್ಯೆ: ಬಂಧಿತನ ಮಾಹಿತಿ ಪಡೆದ ಮಹಾರಾಷ್ಟ್ರ ಎಸ್‌ಐಟಿ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಟಿ.ನವೀನ್‌ಕುಮಾರ್ ಅಲಿಯಾಸ್ ಹೊಟ್ಟೆ ಮಂಜನ ಕುರಿತು ಕೇಂದ್ರ ಹಾಗೂ ನೆರೆರಾಜ್ಯಗಳ ತನಿಖಾ ಸಂಸ್ಥೆಗಳು ಮಾಹಿತಿ ಪಡೆದುಕೊಂಡಿವೆ.

ಕೇಂದ್ರ ಗುಪ್ತದಳ, ತೆಲಂಗಾಣದ ಭಯೋತ್ಪಾದನಾ ನಿಗ್ರಹ ದಳ (ಆಕ್ಟೋಪಸ್), ಮಹಾರಾಷ್ಟ್ರದ ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ ಪಾನ್ಸರೆ ಹತ್ಯೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಸಿಬಿಐ ಹಾಗೂ ಮಹಾರಾಷ್ಟ್ರ ಎಸ್‌ಐಟಿ ಅಧಿಕಾರಿಗಳು ಡಿಸಿಪಿ ಎಂ.ಎನ್.ಅನುಚೇತ್ ಅವರನ್ನು ಸೋಮವಾರ ಭೇಟಿಯಾಗಿ ಮಾಹಿತಿ ಪಡೆದಿದ್ದಾರೆ.

‘ಗೌರಿ ಹತ್ಯೆ ಹಾಗೂ ಮಹಾರಾಷ್ಟ್ರದ ವಿಚಾರವಾದಿಗಳ ಹತ್ಯೆ ನಡುವೆ ಸಾಮ್ಯತೆಗಳಿವೆ ಎಂಬ ಮಾತುಗಳು ಕೇಳಿ ಬಂದಿದ್ದವು. ಹೀಗಾಗಿ, ‌ಸಂಬಂಧಪಟ್ಟ ತನಿಖಾ ಏಜೆನ್ಸಿಗಳು ಮಾಹಿತಿ ವಿನಿಮಯ ಮಾಡಿಕೊಂಡಿವೆ’ ಎಂದು ಎಸ್‌ಐಟಿ ಮೂಲಗಳು ’ಗೆ ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry