ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿಗೆ ಆಯ್ಕೆ

ಸೋಮವಾರ, ಮಾರ್ಚ್ 25, 2019
28 °C

ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿಗೆ ಆಯ್ಕೆ

Published:
Updated:
ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿಗೆ ಆಯ್ಕೆ

ಬೆಳಗಾವಿ: ಇಲ್ಲಿನ ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್‌ನಿಂದ ಕೊಡಮಾಡುವ, 2017–18ನೇ ಸಾಲಿನ ಕಾವ್ಯ, ಕಥೆ ಮತ್ತು ಕಾದಂಬರಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

ಬೆಟಗೇರಿ ಕೃಷ್ಣಶರ್ಮ ಕಾವ್ಯ ಪ್ರಶಸ್ತಿಗೆ ಕವಿ ಎಚ್.ಎಸ್. ವೆಂಕಟೇಶಮೂರ್ತಿ, ಕಾದಂಬರಿ ಪ್ರಶಸ್ತಿಗೆ ಸಾಹಿತಿ ಬರಗೂರ ರಾಮಚಂದ್ರಪ್ಪ ಹಾಗೂ ಕಥಾ ಪ್ರಶಸ್ತಿಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಗಳು ತಲಾ ₹ 50 ಸಾವಿರ ನಗದು ಹಾಗೂ ಸನ್ಮಾನ ಫಲಕವನ್ನು ಒಳಗೊಂಡಿವೆ. ಬೆಟಗೇರಿ ಕೃಷ್ಣಶರ್ಮರ ಜನ್ಮದಿನವಾದ ಏ.16ರಂದು ಬೆಳಗಾವಿಯಲ್ಲಿ ನಡೆಯುವ ಸಮಾರಂಭದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಚಂದ್ರಶೇಖರ ಕಂಬಾರ ಪ್ರಶಸ್ತಿ ಪ್ರದಾನ ಮಾಡುವರು ಎಂದು ಟ್ರಸ್ಟ್‌ ಅಧ್ಯಕ್ಷ ರಾಘವೇಂದ್ರ ಪಾಟೀಲ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry