ಹಜಾರೆ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವೆ: ಸಂತೋಷ್‌ ಹೆಗ್ಡೆ

7

ಹಜಾರೆ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವೆ: ಸಂತೋಷ್‌ ಹೆಗ್ಡೆ

Published:
Updated:

ಹೈದರಾಬಾದ್‌ : ‘ಲೋಕಪಾಲ ಮಸೂದೆ ಜಾರಿಗೆ ತರಬೇಕೆಂದು ಒತ್ತಾಯಿಸಿ ಸಾಮಾಜಿಕ ಹೊರಾಟಗಾರ ಅಣ್ಣಾ ಹಜಾರೆ ಅವರು ದೆಹಲಿಯಲ್ಲಿ ಈ ತಿಂಗಳ 23ರಂದು

ನಡೆಸಲಿರುವ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುತ್ತೇನೆ’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಬುಧವಾರ ಹೇಳಿದ್ದಾರೆ.

2011ರಲ್ಲಿ ಹಜಾರೆ ಅವರು ನಡೆಸಿದ್ದ ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲೂ ಹೆಗ್ಡೆ ಪಾಲ್ಗೊಂಡಿದ್ದರು.

‘ಈಚೆಗೆ ಬೆಂಗಳೂರಿಗೆ ಬಂದಿದ್ದ ಹಜಾರೆ ಅವರು, ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವಂತೆ ನನಗೆ ಆಹ್ವಾನ ನೀಡಿದ್ದರು. ನಾನು ಅದಕ್ಕೆ ಒಪ್ಪಿಗೆ ಸೂಚಿಸಿದ್ದೇನೆ.

ಈ ಹೋರಾಟ ರಾಜಕೀಯ ತರವಾದದ್ದು’ ಎಂದು ಹೇಳಿದ್ದಾರೆ.

‘ಲೋಕಪಾಲ ನೇಮಕ ವಿಚಾರದಲ್ಲಿ ಎನ್‌ಡಿಎ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ಇಲ್ಲ’ ಎಂದು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry