ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಳು ಶಾಸಕರ ವಿರುದ್ಧ ಕ್ರಮ: ಹೈಕೋರ್ಟ್‌ಗೆ ಜೆಡಿಎಸ್‌ ಮೊರೆ

Last Updated 14 ಮಾರ್ಚ್ 2018, 19:59 IST
ಅಕ್ಷರ ಗಾತ್ರ

ಬೆಂಗಳೂರು: 2016 ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಏಳು ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಹೈಕೋರ್ಟ್‌ ಮೆಟ್ಟಿಲು ಹತ್ತುವುದಾಗಿ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

ಶಾಸಕರಾದ ಎನ್‌.ಚಲುವರಾಯಸ್ವಾಮಿ, ಅಖಂಡ ಶ್ರೀನಿವಾಸಮೂರ್ತಿ, ಜಮೀರ್‌ ಅಹಮದ್‌ ಖಾನ್‌, ಎಚ್‌.ಸಿ.ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯಕ್‌ ವಿರುದ್ಧ ಕ್ರಮಕ್ಕಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗೆ ಮತ ನೀಡದೇ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿದ್ದರಿಂದಾಗಿ ಅವರ ವಿರುದ್ಧ ವಿಧಾನಸಭಾ ಸ್ಪೀಕರ್‌ಗೆ ದೂರು ನೀಡಲಾಗಿತ್ತು. ಆದರೆ, ಸ್ಪೀಕರ್‌ ಇಲ್ಲಿಯವರೆಗೂ ಕ್ರಮ ತೆಗೆದುಕೊಂಡಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಸೇರಲು ತೀರ್ಮಾನ:
ರಾಜ್ಯಸಭಾ ಚುನಾವಣೆ ಬಳಿಕ ಜೆಡಿಎಸ್‌ನ ಏಳು ಬಂಡಾಯ ಶಾಸಕರು ಇದೇ 25 ರಂದು ಮೈಸೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT