ಕಾಂಗ್ರೆಸ್ ಮುಕ್ತ ಕರ್ನಾಟಕ: ಶ್ರಮಿಸಲು ಕರೆ

ಮಂಗಳವಾರ, ಮಾರ್ಚ್ 26, 2019
26 °C
ಕಲಬುರ್ಗಿ ದಕ್ಷಿಣ ಮತಕ್ಷೇತ್ರದ ನವಶಕ್ತಿ ಸಮಾವೇಶ

ಕಾಂಗ್ರೆಸ್ ಮುಕ್ತ ಕರ್ನಾಟಕ: ಶ್ರಮಿಸಲು ಕರೆ

Published:
Updated:
ಕಾಂಗ್ರೆಸ್ ಮುಕ್ತ ಕರ್ನಾಟಕ: ಶ್ರಮಿಸಲು ಕರೆ

ಕಲಬುರ್ಗಿ: ‘ಪ್ರಧಾನಿ ನರೇಂದ್ರ ಮೋದಿ ಅವರ ಕಾಂಗ್ರೆಸ್ ಮುಕ್ತ ಭಾರತ ಆಶಯ ಈಡೇರಲು ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಎಲ್ಲರೂ ಶ್ರಮಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ಕಲಬುರ್ಗಿ ದಕ್ಷಿಣ ಮತಕ್ಷೇತ್ರದ ನವಶಕ್ತಿ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಒಂದು ಕಾಲದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಿಂದ ಸಂಸತ್ ಸದಸ್ಯರವರೆಗೆ ಎಲ್ಲರೂ ಕಾಂಗ್ರೆಸ್‌ನವರೇ ಇದ್ದರು. ಆದರೆ ಮೋದಿ ಪ್ರಧಾನಿ ಹಾಗೂ ಅಮಿತ್ ಶಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ 21 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರದ ಗದ್ದುಗೆ ಏರಿದೆ. ಕಲಬುರ್ಗಿ ದಕ್ಷಿಣ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದತ್ತಾತ್ರೇಯ ಪಾಟೀಲ ರೇವೂರ ಅವರನ್ನು ಗೆಲ್ಲಿಸುವ ಮೂಲಕ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡಬೇಕು’ ಎಂದು ತಿಳಿಸಿದರು.

‘ಬಿಜೆಪಿ ವಿಶ್ವದಲ್ಲೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿದ ಪಕ್ಷವಾಗಿದೆ. ನವಶಕ್ತಿ, ಶಕ್ತಿ ಹಾಗೂ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಬೂತ್ ಮಟ್ಟದ ಅಧ್ಯಕ್ಷರು ಎಲ್ಲರೂ ಸೇರಿ ಪಕ್ಷದ ಗೆಲುವಿಗೆ ಪಣತೊಡಬೇಕು’ ಎಂದು ಅವರು ಹೇಳಿದರು.

ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ‘ದೇಶದ 21 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಲ್ಲಿದೆ. ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡುವ ಮೂಲಕ 22ನೇ ರಾಜ್ಯದಲ್ಲೂ ಬಿಜೆಪಿ ಬಾವುಟ ಹಾರಿಸಬೇಕು. ಇದಕ್ಕಾಗಿ ನೀವೆಲ್ಲರೂ ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು’ ಎಂದು ಹೇಳಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ರಾಜ್ಯ ಸಹ ಉಸ್ತುವಾರಿ ಡಿ.ಪುರಂದರೇಶ್ವರಿ, ತೆಲಂಗಾಣದ ಶ್ರೀನಿವಾಸ್, ಶಾಸಕ ಬಿ.ಜಿ.ಪಾಟೀಲ, ಮುಖಂಡರಾದ ತುಕಾರಾಮ ಶೆಟ್ಟಿ, ಮಹಾಂತಗೌಡ ಪಾಟೀಲ, ವಿದ್ಯಾಸಾಗರ ಶಾಬಾದಿ, ದತ್ತಾತ್ರೇಯ ತೂಗಾಂವ್, ಧರ್ಮಣ್ಣ ಇಟಗಾ, ಆರ್.ಎಸ್.ಪಾಟೀಲ, ಸಂಗಮೇಶ ರಾಜೋಳ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry