ಹು–ಧಾ ಪಾಲಿಕೆ ನೂತನ ಆಯುಕ್ತ ಶಕೀಲ್‌ ಅಹ್ಮದ್‌

7

ಹು–ಧಾ ಪಾಲಿಕೆ ನೂತನ ಆಯುಕ್ತ ಶಕೀಲ್‌ ಅಹ್ಮದ್‌

Published:
Updated:
ಹು–ಧಾ ಪಾಲಿಕೆ ನೂತನ ಆಯುಕ್ತ ಶಕೀಲ್‌ ಅಹ್ಮದ್‌

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ಶಕೀಲ್‌ ಅಹ್ಮದ್‌ ಅವರನ್ನು ನಿಯೋಜಿಸಲಾಗಿದೆ.

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಶಕೀಲ್‌ ಅವರು, ಈ ಮೊದಲು ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಜಂಟಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

ಸಿದ್ಧಲಿಂಗಯ್ಯ ಹಿರೇಮಠ ಅವರಿಗೆ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಪಾಲಿಕೆ ಹೆಚ್ಚುವರಿ ಆಯುಕ್ತ ಅಜೀಜ್‌ ದೇಸಾಯಿ ಅವರನ್ನು ಶಿರಸಿ ಉಪವಿಭಾಗಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಅವರನ್ನು ತುಮಕೂರು ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಎಸ್‌.ಜೆ.ಸೋಮಶೇಖರ ಅವರನ್ನು ನಿಯೋಜಿಸಲಾಗಿದೆ.

ಧಾರವಾಡ ಉಪವಿಭಾಗಾಧಿಕಾರಿ ಮಹೇಶ ಕರ್ಜಗಿ ಅವರನ್ನು ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯನ್ನಾಗಿ ವರ್ಗಾಯಿಸಲಾಗಿದೆ. ಕರ್ಜಗಿ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಎನ್‌.ಮೊಹಮ್ಮದ್‌ ಜುಬೇರ್‌ ಅವರನ್ನು ನಿಯೋಜಿಸಲಾಗಿದೆ.

ಹೆಸ್ಕಾಂನ ಖಾಲಿ ಇದ್ದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಕವಿತಾ ಯೋಗಪ್ಪನವರ ಅವರನ್ನು ನಿಯೋಜಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry