ಸಿಬಿಎಸ್‌ಇ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ

ಬುಧವಾರ, ಮಾರ್ಚ್ 20, 2019
26 °C

ಸಿಬಿಎಸ್‌ಇ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ

Published:
Updated:
ಸಿಬಿಎಸ್‌ಇ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ

ನವದೆಹಲಿ: ಸಿಬಿಎಸ್‌ಇ 12ನೇ ತರಗತಿಯ ಲೆಕ್ಕಶಾಸ್ತ್ರ ಪ್ರಶ್ನೆಪತ್ರಿಕೆ ಬುಧವಾರ ಸಂಜೆ ವಾಟ್ಸ್‌ಆ್ಯಪ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿದೆ ಎಂದು ಆರೋಪಿಸಲಾಗಿದೆ. ಆದರೆ, ಸಿಬಿಎಸ್‌ಇ ಇದನ್ನು ತಳ್ಳಿ ಹಾಕಿದೆ.

ಲೆಕ್ಕಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ತಮಗೆ ಸಾಕಷ್ಟು ದೂರುಗಳು ಬಂದಿವೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗುರುವಾರ ಹೇಳಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಪರೀಕ್ಷಾ ಮಂಡಳಿ ವಿರುದ್ಧ ದೂರು ನೀಡಿ, ತನಿಖೆ ನಡೆಸುವಂತೆ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಿಕ್ಷಣ ಸಚಿವರೂ ಆಗಿರುವ ಸಿಸೋಡಿಯಾ ಹೇಳಿದ್ದಾರೆ. ‘ಪರೀಕ್ಷಾ ಮಂಡಳಿಯ ನಿರ್ಲಕ್ಷ್ಯದಿಂದ ಕಷ್ಟಪಟ್ಟು ಓದಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಕಠಿಣ ಕ್ರಮ ಅಗತ್ಯ’ ಎಂದಿದ್ದಾರೆ.

ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿ ಹರಡಿಸುತ್ತಿರುವವರ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದಾಗಿ ಸಿಬಿಎಸ್‌ಇ ತಿಳಿಸಿದೆ.

‘ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಮುದ್ರೆ ಇರುವ ಪ್ರಶ್ನೆಪತ್ರಿಕೆಗಳು ರವಾನೆಯಾಗಿವೆ. ಸ್ಥಳೀಯ ಮಟ್ಟದಲ್ಲಿ ಕೆಲ ಕಿಡಿಗೇಡಿಗಳು ಪರೀಕ್ಷೆಯ ಪಾವಿತ್ರ್ಯತೆ ಹಾಳು ಮಾಡುವ ಉದ್ದೇಶದಿಂದ ವಾಟ್ಸ್‌ಆ್ಯಪ್‌ನಲ್ಲಿ ಸಂದೇಶಗಳನ್ನು ಹರಿಬಿಡುತ್ತಿದ್ದಾರೆ’ ಎಂದು ಪರೀಕ್ಷಾ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry