ಕಿರುಕುಳ ಆರೋಪ: ಅಧಿಕಾರಿಯನ್ನು ವಾಪಸ್‌ ಕರೆಸಿಕೊಳ್ಳಲು ತೀರ್ಮಾನಿಸಿದ ಪಾಕಿಸ್ತಾನ

7

ಕಿರುಕುಳ ಆರೋಪ: ಅಧಿಕಾರಿಯನ್ನು ವಾಪಸ್‌ ಕರೆಸಿಕೊಳ್ಳಲು ತೀರ್ಮಾನಿಸಿದ ಪಾಕಿಸ್ತಾನ

Published:
Updated:
ಕಿರುಕುಳ ಆರೋಪ: ಅಧಿಕಾರಿಯನ್ನು ವಾಪಸ್‌ ಕರೆಸಿಕೊಳ್ಳಲು ತೀರ್ಮಾನಿಸಿದ ಪಾಕಿಸ್ತಾನ

ಇಸ್ಲಾಮಾಬಾದ್‌: ದೆಹಲಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಾಕಿಸ್ತಾನ ಉನ್ನತ ರಾಜತಾಂತ್ರಿಕ ಅಧಿಕಾರಿ ವಿರುದ್ಧ ಕಿರುಕುಳ ಆರೋಪ ಕೇಳಿಬಂದ ಬೆನ್ನಲ್ಲೇ ಆರೋಪಿಯನ್ನು ದೇಶಕ್ಕೆ ಕರೆಸಿಕೊಂಡು ಸಮಾಲೋಚನೆ ನಡೆಸುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಹೇಳಿದೆ.

‘ಭಾರತದಲ್ಲಿರುವ ಪಾಕಿಸ್ತಾನದ ಅಧಿಕಾರಿಗಳ ಹಾಗೂ ಅವರ ಕುಟುಂಬದವರ ಜತೆ ಚರ್ಚೆ ನಡೆಸಿದ ಬಳಿಕ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದು ಸಚಿವಾಲಯದ ವಕ್ತಾರ ಮೊಹಮದ್‌ ಫೈಸಾಲ್‌ ಹೇಳಿದ್ದಾರೆ.

ರಾಜತಾಂತ್ರಿಕ ಕಚೇರಿ ಸಿಬ್ಬಂದಿಯೊಬ್ಬರಿಗೆ ಸೊಹೈಲ್‌ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು, ಅವರು ಈ ವಾರವೇ ವಾಪಸ್ಸಾಗುವ ನಿರೀಕ್ಷೆ ಇದೆ ಎಂದೂ ಫೈಸಾಲ್‌ ತಿಳಿಸಿದ್ದಾರೆ.

http://www.nzherald.co.nz/world/news/article.cfm?c_id=2&objectid=12013668

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry