ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ವೈಎಸ್‌ಆರ್‌ ಕಾಂಗ್ರೆಸ್‌ ನಿರ್ಧಾರ; ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಬೆಂಬಲಿಸುವ ಸೂಚನೆ

7

ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ವೈಎಸ್‌ಆರ್‌ ಕಾಂಗ್ರೆಸ್‌ ನಿರ್ಧಾರ; ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಬೆಂಬಲಿಸುವ ಸೂಚನೆ

Published:
Updated:
ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ವೈಎಸ್‌ಆರ್‌ ಕಾಂಗ್ರೆಸ್‌ ನಿರ್ಧಾರ; ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಬೆಂಬಲಿಸುವ ಸೂಚನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡಿಸುವುದಾಗಿ ಘೋಷಿಸಿದೆ.

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಕುರಿತು ವಿವಿಧ ಪಕ್ಷಗಳು ಗುರುವಾರ ಲೋಕಸಭೆಯಲ್ಲಿ ನಡೆಸಿದ ಪ್ರತಿಭಟನೆ ಗದ್ಧಲದ ರೂಪ ಪಡೆಯಿತು. ಇದೇ ಸಂದರ್ಭದಲ್ಲಿ ವೈಎಸ್ಆರ್‌ ಕಾಂಗ್ರೆಸ್ ಎನ್‌ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಸಲುವಾಗಿ ನೋಟಿಸ್‌ ಜಾರಿ ಮಾಡಿದ್ದು, ಲೋಕಸಭೆಯ ವಿರೋಧ ಪಕ್ಷ ಸೇರಿ ಇತರ ಪಕ್ಷಗಳ ಬೆಂಬಲ ಕೋರಿದೆ.

ಅಗತ್ಯವಾದಲ್ಲಿ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಅವಿಶ್ವಾಸ ಗೊತ್ತುವಳಿ ಮಂಡನೆಯನ್ನು ಬೆಂಬಲಿಸಲಿದೆ ಎಂದು ಆಂಧ್ರ ಪ್ರದೇಶ ಸಿಎಂ ಎನ್‌.ಚಂದ್ರಬಾಬು ನಾಯ್ಡು ವಿಧಾನಸಭೆಯಲ್ಲಿ ಹೇಳಿದ್ದಾರೆ.

ಬಿಜೆಪಿ ಜತೆಗಿನ ಮೈತ್ರಿ ಮುರಿದು ರಾಷ್ಟ್ರೀಯ ಜನತಾಂತ್ರಿಕ ಒಕ್ಕೂಟ(ಎನ್.ಡಿ.ಎ)ದಿಂದ ಹೊರಬರಲು ಟಿಡಿಪಿ ಸಜ್ಜಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿರುವುದಾಗಿ ಫಸ್ಟ್‌ಪೋಸ್ಟ್‌ ವರದಿ ಮಾಡಿದೆ. ಶುಕ್ರವಾರ ನಡೆಯಲಿರುವ ಟಿಡಿಪಿಯ ನೀತಿ ನಿರ್ಣಯ ಸಭೆಯ ನಂತರ ಈ ಕುರಿತು ನಿರ್ಧಾರ ಹೊರಬೀಳಲಿದೆ ಎನ್ನಲಾಗಿದೆ.

ವೈಎಸ್‌ಆರ್‌ ಕಾಂಗ್ರೆಸ್‌ನ ಮುಖಂಡ ಜಗನ್‌ಮೋಹನ್‌ ರೆಡ್ಡಿ ಲೋಕಸಭೆಯಲ್ಲಿ ಎನ್‌ಡಿಎ ಸರ್ಕಾರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಬೆಂಬಲಿಸುವಂತೆ ಇತರ ಪಕ್ಷಗಳಿಗೆ ಪತ್ರ ಬರೆದಿರುವುದಾಗಿ ವರದಿಯಾಗಿದೆ.

ಅವಿಶ್ವಾಸ ಗೊತ್ತುವಳಿ ಮಂಡನೆಗೆ ಲೋಕಸಭೆಯ ಕನಿಷ್ಠ 50 ಸದಸ್ಯರ ಬೆಂಬಲ ಅವಶ್ಯ. ವೈಎಸ್‌ಆರ್‌ ಕಾಂಗ್ರೆಸ್‌ 9 ಸಂಸದರನ್ನು ಹೊಂದಿದೆ. ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆ ಏ.5ರೊಳಗೆ ಈಡೇರದಿದ್ದರೆ, ಏ.6ರಂದು ಪಕ್ಷದ ಎಲ್ಲ ಸಂಸದರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಟಿಡಿಪಿ 16 ಲೋಕಸಭಾ ಸದಸ್ಯರನ್ನು ಹೊಂದಿದೆ. ಇತ್ತೀಚೆಗೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನದ ವಿಚಾರವಾಗಿಯೇ ಇಬ್ಬರು ಟಿಡಿಪಿ ಸಂಸದರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry