ಕಾರ್ತಿ ಬಂಧನ ತಡೆ ವಿಸ್ತರಣೆ

7

ಕಾರ್ತಿ ಬಂಧನ ತಡೆ ವಿಸ್ತರಣೆ

Published:
Updated:

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣದಲ್ಲಿ ಕಾರ್ತಿ ಚಿದಂಬರಂ ಅವರನ್ನು ಬಂಧಿಸದಂತೆ ಜಾರಿ ನಿರ್ದೇಶನಾಲಯ ನೀಡಿದ್ದ ತಡೆ

ಅವಧಿಯನ್ನು ಸುಪ್ರೀಂ ಕೋರ್ಟ್ ಮಾರ್ಚ್‌ 26ರವರೆಗೆ ವಿಸ್ತರಿಸಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಈ ಆದೇಶ ನೀಡಿದೆ. ಕಾರ್ತಿ ಅವರನ್ನು ಮಾರ್ಚ್‌ 22ರವರೆಗೆ ಬಂಧಿಸದಂತೆ ದೆಹಲಿ ಹೈಕೋರ್ಟ್ ಆದೇಶಿಸಿತ್ತು.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಆರೋಪಿಗಳನ್ನು ಬಂಧಿಸುವ ಜಾರಿ ನಿರ್ದೇಶನಾಲಯದ ಅಧಿಕಾರವನ್ನು ಪ್ರಶ್ನಿಸಿ ಕಾರ್ತಿ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತನಗೆ ವರ್ಗಾಯಿಸಿಕೊಂಡಿದೆ. ಕಾಯ್ದೆ ಅಡಿಯಲ್ಲಿ ಇರುವ ಬಂಧನ ಅಧಿಕಾರದ ಬಗ್ಗೆ ವಿವಿಧ ಹೈಕೋರ್ಟ್‌ಗಳು ಭಿನ್ನ ನಿಲುವುಗಳನ್ನು ಪ್ರಕಟಿಸಿವೆ. ಹಾಗಾಗಿ ಈ ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಚಾರಣೆಗೆ ಒಳಪಡಿಸುವುದೇ ಉತ್ತಮ ಎಂದು ಪೀಠ ಹೇಳಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry