ಕೆಪಿಜೆಪಿ: ಅಭ್ಯರ್ಥಿ ಪಟ್ಟಿ ಬಿಡುಗಡೆ

7

ಕೆಪಿಜೆಪಿ: ಅಭ್ಯರ್ಥಿ ಪಟ್ಟಿ ಬಿಡುಗಡೆ

Published:
Updated:
ಕೆಪಿಜೆಪಿ: ಅಭ್ಯರ್ಥಿ ಪಟ್ಟಿ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ (ಕೆಪಿಜೆಪಿ) 24 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಹಾಗೂ ಪ್ರಣಾಳಿಕೆಯನ್ನು ಪಕ್ಷದ ಅಧ್ಯಕ್ಷ  ಡಿ. ಮಹೇಶ್‌ ಗೌಡ ಬಿಡುಗಡೆಗೊಳಿಸಿದರು.‌

‘ಇನ್ನೂ 75 ಅಭ್ಯರ್ಥಿಗಳ ಆಯ್ಕೆ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಶೀಘ್ರವೇ 2ನೇ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಾಗುವುದು’ ಎಂದು ತಿಳಿಸಿದರು.

ಪ್ರಣಾಳಿಕೆಯ ಪ್ರಮುಖ ಅಂಶಗಳು: ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗೆ ಸಮಾನವಾಗಿ ಗುಣಮಟ್ಟದ ಶಿಕ್ಷಣ ನೀಡುವುದು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಧುನೀಕರಣ,  ಗ್ರಾಮೀಣ ಪ್ರದೇಶಗಳಲ್ಲಿ ಹಗಲಿನಲ್ಲಿ 12 ಗಂಟೆ 3 ಫೇಸ್‌ ವಿದ್ಯುತ್, ಎಲ್ಲಾ ಕೃಷಿಕರಿಗೆ ಸೌರಶಕ್ತಿ ಸೌಲಭ್ಯ, ಪ್ರತಿ ಕುಟುಂಬಕ್ಕೆ ಉದ್ಯೋಗ ಖಾತರಿ ಯೋಜನೆ, ಹೋಬಳಿ ಮಟ್ಟದಲ್ಲಿ ಮಹಿಳಾ ಪೊಲೀಸ್‌ ಠಾಣೆ, ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ, ಒಳಚರಂಡಿ ವ್ಯವಸ್ಥೆ, ಸಾವಿರ ಮನೆಗಳಿರುವ ಗ್ರಾಮಗಳಲ್ಲಿ ರಂಗ ಮಂದಿರ ನಿರ್ಮಾಣ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry