ಸ್ಪೈಸ್‌ ಜೆಟ್‌ ವಿಮಾನದಲ್ಲಿ ತಾಂತ್ರಿಕ ದೋಷ

7

ಸ್ಪೈಸ್‌ ಜೆಟ್‌ ವಿಮಾನದಲ್ಲಿ ತಾಂತ್ರಿಕ ದೋಷ

Published:
Updated:

ಮಂಗಳೂರು: ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಸ್ಪೈಸ್‌ ಜೆಟ್‌ ವಿಮಾನದ ಎಂಜಿನ್‌ನಲ್ಲಿ ಬುಧವಾರ ತಾಂತ್ರಿಕ ದೋಷದಿಂದ ಹಾರಾಟ ರದ್ದುಪಡಿಸಲಾಯಿತು.

ಈ ವಿಮಾನದ ಬುಧವಾರ ಬೆಳಿಗ್ಗೆ 8.50ಕ್ಕೆ ಇಲ್ಲಿಂದ ಹೈದರಾಬಾದ್‌ಗೆ ತೆರಳುತ್ತಿತ್ತು. 31 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಸ್ಪೈಸ್ ಜೆಟ್ ವಿಮಾನ ಟೇಕಾಫ್‌ ಆಗುವ ಹಂತದಲ್ಲಿಯೇ ದೋಷ ಇರುವುದನ್ನು ಪೈಲೆಟ್‌ ಗಮನಿಸಿದ್ದಾರೆ. ಕೂಡಲೇ ವಿಮಾನ ಸಂಚಾರ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ರವಾನಿಸಿದ್ದಾರೆ. ನಂತರ ವಿಮಾನ ಸಂಚಾರವನ್ನು ರದ್ದುಪಡಿಸಲಾಯಿತು.

ಸ್ಪಷ್ಟನೆ ನೀಡಿರುವ ಸ್ಪೈಸ್ ಜೆಟ್‌ ಏರ್‌ಲೈನ್ಸ್‌, ವಿಮಾನದಲ್ಲಿ ಹೊಗೆ ಅಥವಾ ಬೆಂಕಿ ಕಾಣಿಸಿಕೊಂಡಿರಲಿಲ್ಲ. ತಾಂತ್ರಿಕ ಸಮಸ್ಯೆ ಎದುರಾಗಿದ್ದರಿಂದ ವಿಮಾನ ಸಂಚಾರವನ್ನು ರದ್ದುಪಡಿಸಲಾಗಿತ್ತು. ವಿಮಾನ ಸದ್ಯಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದ್ದು, ಸುಸ್ಥಿತಿಯಲ್ಲಿದೆ ಎಂದು ತಿಳಿಸಿದೆ.

ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗೆ ಇಳಿಸಲಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಟಿಕೆಟ್‌ ಮೊತ್ತವನ್ನು ಹಿಂದಿರುಗಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry