ಅಂಗಡಿಯಲ್ಲಿ ಅಗ್ನಿ ಅವಘಡ: ಅಪಾರ ಪ್ರಮಾಣದ ವಸ್ತುಗಳು ಭಸ್ಮ

7

ಅಂಗಡಿಯಲ್ಲಿ ಅಗ್ನಿ ಅವಘಡ: ಅಪಾರ ಪ್ರಮಾಣದ ವಸ್ತುಗಳು ಭಸ್ಮ

Published:
Updated:
ಅಂಗಡಿಯಲ್ಲಿ ಅಗ್ನಿ ಅವಘಡ: ಅಪಾರ ಪ್ರಮಾಣದ ವಸ್ತುಗಳು ಭಸ್ಮ

ಮಂಗಳೂರು: ನಗರದ ಬೀಬಿ ಅಲಾಬಿ ರಸ್ತೆಯಲ್ಲಿರುವ ಗುಜರಿ ಅಂಗಡಿಯೊಂದರಲ್ಲಿ ಶುಕ್ರವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ.

ಬೆಂಕಿಯ ಜ್ವಾಲೆಗೆ ಸಿಲುಕಿ ಅಪಾರ ಪ್ರಮಾಣದ ವಸ್ತುಗಳು ಸುಟ್ಟುಹೋಗಿವೆ. ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಸಿಬ್ಬಂದಿ ನಾಲ್ಕು ಅಗ್ನಿಶಾಮಕ ವಾಹನಗಳ ನೆರವಿನಲ್ಲಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

ಮಂಗಳೂರು ಉತ್ತರ (ಬಂದರು) ಠಾಣೆ ಪೊಲೀಸರು ಕಾರ್ಯಾಚರಣೆಗೆ ಸಹಕರಿಸಿದರು. ಅವಘಡಕ್ಕೆ ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry