ಬಿಜೆಪಿ ಮುಖಂಡನ ಮೇಲೆ ದಾಳಿ ನಡೆಸಿದ್ದ ಉಗ್ರರು ಎನ್‌ಕೌಂಟರ್‌ಗೆ ಬಲಿ

7

ಬಿಜೆಪಿ ಮುಖಂಡನ ಮೇಲೆ ದಾಳಿ ನಡೆಸಿದ್ದ ಉಗ್ರರು ಎನ್‌ಕೌಂಟರ್‌ಗೆ ಬಲಿ

Published:
Updated:
ಬಿಜೆಪಿ ಮುಖಂಡನ ಮೇಲೆ ದಾಳಿ ನಡೆಸಿದ್ದ ಉಗ್ರರು ಎನ್‌ಕೌಂಟರ್‌ಗೆ ಬಲಿ

ಶ್ರೀನಗರ: ಇಲ್ಲಿನ ಹೊರವಲಯದ ಬಲ್ಹಾಮದಲ್ಲಿ ಬಿಜೆಪಿ ಮುಖಂಡ ಮೊಹಮ್ಮದ್‌ ಅನ್ವರ್‌ ಖಾನ್‌  ಮೇಲೆ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಗುರುವಾರ ತಡರಾತ್ರಿ ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿವೆ.

ಉಗ್ರರ ದಾಳಿಯಿಂದ ಅನ್ವರ್‌ ಖಾನ್‌ ಅವರು ಪಾರಾಗಿದ್ದು, ಅವರ ಭದ್ರತಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದರು.

‘ಅನ್ವರ್‌ ಅವರು ಇಬ್ಬರು ವೈಯಕ್ತಿಕ ಭದ್ರತಾ ಸಿಬ್ಬಂದಿಯ ಜೊತೆಗಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿ ರೈಫಲ್‌ ಕಸಿಯಲು ಯತ್ನಿಸಿದ್ದಾರೆ. ಸಿಬ್ಬಂದಿ ಪ್ರತಿದಾಳಿ ನಡೆಸಿದಾಗ ಪರಾರಿಯಾಗಿದ್ದಾರೆ’ ಎಂದು ಅಧಿಕಾರಿಗಳು ಹೇಳಿದ್ದರು.

ಭದ್ರತಾ ಪಡೆಗಳು ಸ್ಥಳಕ್ಕೆ ತೆರಳಿ ಉಗ್ರರ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದವು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry