ದುಶ್ಚಟಗಳಿಂದ ದೂರವಿರಲು ಸಲಹೆ

7

ದುಶ್ಚಟಗಳಿಂದ ದೂರವಿರಲು ಸಲಹೆ

Published:
Updated:

ಜನವಾಡ: ‘ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರುವ ಮೂಲಕ ಉತ್ತಮ ಸ್ವಾಸ್ಥ್ಯ ಕಾಯ್ದುಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಬೀದರ್‌ ತಾಲ್ಲೂಕಿನ ಆಣದೂರು ಗ್ರಾಮದ ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ 36ನೇ ವಾರ್ಷಿಕೋತ್ಸವ, ಮುಖ್ಯ ಶಿಕ್ಷಕ ಹುದ್ದೆಯಿಂದ ನಿವೃತ್ತರಾದ ರಘುನಾಥ ಭೂರೆ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಒಳ್ಳೆಯ ಚಾರಿತ್ರ್ಯ ಹೊಂದಬೇಕು. ತಂದೆ–ತಾಯಿ, ಗುರು–ಹಿರಿಯರನ್ನು ಗೌರವಿಸಬೇಕು’ ಎಂದು ಹೇಳಿದರು.

ಮಲ್ಲಿಕಾರ್ಜುನ ತಾಡಂಪಳ್ಳಿ, ಕಮಲಸಿಂಗ್‌ ರಾಠೋಡ ಮಾತನಾಡಿದರು.

ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಮೃತರಾವ್‌ ಚಿಮಕೋಡೆ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗೋವರ್ಧನ ರಾಠೋಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲಾವತಿ ಜಗನ್ನಾಥ ರೆಡ್ಡಿ ಉಪಸ್ಥಿತರಿದ್ದರು.

ಕಲ್ಯಾಣಪ್ಪ ಪಾಪಡೆ ಸ್ವಾಗತಿಸಿದರು. ದಿಗಂಬರ ಆಲೂರೆ ನಿರೂಪಿಸಿದರು. ಗುರುಪುತ್ರ ಶಂಭು ವಂದಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry