ಶೀಘ್ರವೇ ಸಭೆ ಕರೆಯುವ ಭರವಸೆ

7

ಶೀಘ್ರವೇ ಸಭೆ ಕರೆಯುವ ಭರವಸೆ

Published:
Updated:

ಗೋಕಾಕ: ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ಹಾಗೂ ಸಂಸದರ ಸಭೆ ಕರೆದು ಬೆಳಗಾವಿ ಜಿಲ್ಲಾ ವಿಭಜಿಸುವ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭರವಸೆ ನೀಡಿದರು.

ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಗೋಕಾಕ ಶೂನ್ಯ ಸಂಪಾದನಮಠದ ಪೀಠಾಧಿಪತಿ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದ ನಿಯೋಜಿತ ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿಯ ಮುಖಂಡರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗೋಕಾಕನ್ನು ಜಿಲ್ಲಾ ಕೇಂದ್ರವನ್ನಾಗಿ ರಚಿಸುವಂತೆ ಮನವಿ ಮಾಡಿಕೊಂಡರು. ಆ ನಿಯೋಗಕ್ಕೆ ಅವರು ಶೀಘ್ರದಲ್ಲಿಯೇ ಸಭೆ ಕರೆಯುವುದಾಗಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ಗೋಕಾಕ ಮತ್ತು ಚಿಕ್ಕೋಡಿ ಜಿಲ್ಲೆಯನ್ನಾಗಿ ರಚಿಸುವುದಕ್ಕೆ ನನ್ನ ವಿರೋಧವೇನೂ ಇಲ್ಲ. ಆದರೆ ಜಿಲ್ಲೆಗಳ ಪುನರ್ ರಚನೆಗೆ ಸಂಬಂಧಿಸಿದ ಎಲ್ಲ ಜನಪ್ರತಿನಿಧಿಗಳು ಹಾಗೂ ಕನ್ನಡಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಂತಿಮ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry