ಕಾರ್ಯಕರ್ತರ ನಡುವೆ ಮಾರಾಮರಿ: ಭದ್ರತೆ

7

ಕಾರ್ಯಕರ್ತರ ನಡುವೆ ಮಾರಾಮರಿ: ಭದ್ರತೆ

Published:
Updated:
ಕಾರ್ಯಕರ್ತರ ನಡುವೆ ಮಾರಾಮರಿ: ಭದ್ರತೆ

ಮಾಗಡಿ: ಕಾಂಗ್ರೆಸ್‌ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಬುಧವಾರ ನಡೆದ ಮಾರಾಮರಿ ಘಟನೆ ಹಿನ್ನೆಲೆಯಲ್ಲಿ ಗುರುವಾರ ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆಕೈಗೊಳ್ಳಲಾಗಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ‍ಉಭಯ ಪಕ್ಷಗಳ ಕಾರ್ಯಕರ್ತರ ಪರಸ್ಪರ ಆರೋಪ – ಪ್ರತ್ಯಾರೋಪದ ಹಿನ್ನೆಲೆಯಲ್ಲಿ ಘರ್ಷಣೆ ನಡೆದಿತ್ತು. ಘಟನೆಯಲ್ಲಿ ಜೆಡಿಎಸ್ ಮುಖಂಡ ಹಾಗೂ ಪುರಸಭೆ ಸದಸ್ಯ ಕೆ.ವಿ.ಬಾಲರಘು ಹಾಗೂ ಇತರರ ಮೇಲೆ ಹಲ್ಲೆ ನಡೆದು, ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಚೇತರಿಕೆ:‌ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೆ.ವಿ.‌ಬಾಲರಘು ಬೆಂಗಳೂರಿನ ಕೆಂಪೇಗೌಡ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಂಜುನಾಥ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಪೂಜಾರಿ ಪಾಳ್ಯದ ಕೃಷ್ಣಮೂರ್ತಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಜಾಮೀನು: ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿತರಾಗಿದ್ದ ಕಾಂಗ್ರೆಸ್‌ನ ಮುಖಂಡ ಎಚ್‌.ಜೆ.ಪುರುಷೋತ್ತಮ್‌, ಮಂಜುನಾಥ ಬಿ.ಪಿ, ಕಿರಣ್‌ ಬೈಚಾಪುರ, ನರಸಿಂಹಮೂರ್ತಿ, ಆನಂದ್‌ ಕುಮಾರ್‌ ಅವರಿಗೆ ಜಾಮೀನು ನೀಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry