ಗ್ರಾಮೀಣಾಭಿವೃದ್ಧಿ ಯುವಕರ ಧ್ಯೇಯವಾಗಲಿ

7

ಗ್ರಾಮೀಣಾಭಿವೃದ್ಧಿ ಯುವಕರ ಧ್ಯೇಯವಾಗಲಿ

Published:
Updated:

ತುಮಕೂರು: ಗ್ರಾಮೀಣಾಭಿವೃದ್ಧಿ ಯುವಕರ ಧ್ಯೇಯವಾಗಲಿ ಎಂದು ತುಮಕೂರು ವಿಶ್ವವಿದ್ಯಾನಿಲಯದ ಬುದ್ಧ ಅಧ್ಯಯನ ಪೀಠದ ನಿರ್ದೇಶಕ ಡಾ.ಬಿ.ರಮೇಶ್ ಹೇಳಿದರು.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸೋರಲಮಾವು ಗ್ರಾಮದಲ್ಲಿ ಉದಯೋನ್ಮುಖ ಯುವಕ ಸಂಘ, ನೆಹರು ಯುವ ಕೇಂದ್ರ ಹಾಗೂ ಅರುಣೋದಯ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ನಡೆದ ’ನೆರೆ ಹೊರೆ ಯುವ ಸಂಸತ್’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಿಯುಸಿಎಲ್‌ ಜಿಲ್ಲಾ ಘಟಕದ ಅಧ್ಯಕ್ಷ ಕೆ.ದೊರೈರಾಜ್ ಮಾತನಾಡಿ,‘ ಯುವಕರು ಪ್ರಗತಿಪರ ಚಿಂತನೆಗಳನ್ನು ಗಮನದಲ್ಲಿರಿಸಿಕೊಳ್ಳಬೇಕು. ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾವಂತ ಯುವಕರು ಹೆಚ್ಚು ಸಕ್ರಿಯರಾಗಿರಬೇಕು’ ಎಂದರು.  ಸಾಹಿತಿ ಡಾ.ಓ.ನಾಗರಾಜು ಮಾತನಾಡಿದರು. ಪ್ರಾಧ್ಯಾಪಕ ಡಾ.ಮುನಿರಾಜು, ಡಾ.ಮಹಾಲಿಂಗ, ಸಮಾಜ ಕಾರ್ಯ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಾದ ರಾಜಶೇಖರ್, ಲಕ್ಷ್ಮಿರಂಗಯ್ಯ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry