ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

7
ಪೊಲೀಸ್‌ ಅಧಿಕಾರಿಗಳೊಂದಿಗೆ ಡಿ.ಜಿ ಸಭೆ

ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

Published:
Updated:

ಹುಬ್ಬಳ್ಳಿ: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶ ನೀಡದಂತೆ ಕ್ರಮಕೈಗೊಳ್ಳಬೇಕು’ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌.ರಾಜು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಹುಬ್ಬಳ್ಳಿ–ಧಾರವಾಡ ಪೊಲೀಸ್‌ ಕಮಿಷನರೇಟ್‌ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾತನಾಡಿದರು.

‘ಮದ್ಯ, ಹಣ ಅಕ್ರಮ ಸಾಗಣೆ ಬಗ್ಗೆ ನಿಗಾ ವಹಿಸಬೇಕು. ಚೆಕ್‌ಪೋಸ್ಟ್‌ಗಳನ್ನು ತೆರೆದು, ನಿರಂತರವಾಗಿ ವಾಹನಗಳ ತಪಾಸಣೆ ಮಾಡಬೇಕು. ಯಾವುದೇ ಅಕ್ರಮ ಕಂಡುಬಂದರೂ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ವಿಧಾನಸಭಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳ ಬಗ್ಗೆ ಹದ್ದಿನ ಕಣ್ಣಿರಿಸಬೇಕು’ ಎಂದು ಹೇಳಿದರು.

ಪೊಲೀಸರ ಕ್ರಮಕ್ಕೆ ಮೆಚ್ಚುಗೆ: ‘ಅವಳಿ ನಗರದಲ್ಲಿ ಜಾರಿ ಮಾಡಲಾಗಿರುವ ‘ಹೆಲ್ಮೆಟ್‌ ಧರಿಸದಿದ್ದರೆ, ಪೆಟ್ರೋಲ್‌ ಇಲ್ಲ’ ವಿನೂತನ ಪ್ರಯೋಗಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಮಿಷನರ್ ಎಂ.ಎನ್‌. ನಾಗರಾಜ, ಎಸ್ಪಿ ಜಿ. ಸಂಗೀತಾ, ಡಿಸಿಪಿಗಳಾದ ರೇಣುಕಾ ಸುಕುಮಾರ್‌, ನೇಮಗೌಡ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry