‘ವಿಜ್ಞಾನ, ತಂತ್ರಜ್ಞಾನಕ್ಕೆ ಹೆಚ್ಚಿನ ಬೇಡಿಕೆ’

7

‘ವಿಜ್ಞಾನ, ತಂತ್ರಜ್ಞಾನಕ್ಕೆ ಹೆಚ್ಚಿನ ಬೇಡಿಕೆ’

Published:
Updated:

ಧಾರವಾಡ: ‘ಪ್ರಸ್ತುತ ಜಗತ್ತಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಹೆಚ್ಚಿನ ಬೇಡಿಕೆ ಇದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಹೇಳಿದರು.

ಇಲ್ಲಿನ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಗುರುವಾರ ಏರ್ಪಡಿಸಿದ್ದ ‘ಇನ್‌ಸಿಗ್ನಿಯಾ’ ತಾಂತ್ರಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

‘ವಿಜ್ಞಾನ ಮತ್ತು ತಂತ್ರಜ್ಞಾನದ ಮೇಲೆ ಜಗತ್ತು ನಡೆಯುತ್ತಿದ್ದು, ಪ್ರತಿಯೊಂದು ಹಂತದಲ್ಲಿಯೂ ಈ ವಿಭಾಗದ ವಿದ್ಯಾರ್ಥಿಗಳಿಗೆ ಅವಕಾಶವಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಉತ್ತಮ ಅಭ್ಯಾಸ ಮಾಡಿ ಉನ್ನತ ಗುರಿ ತಲುಪಬೇಕು’ ಎಂದು ಹೇಳಿದರು.

‘ಎಂಜಿನಿಯರಿಂಗ್ ವಿದ್ಯಾರ್ಥಿಗಳು ಶಿಕ್ಷಣ ಮುಗಿಸುತ್ತಿದ್ದಂತೆ ಹೆಚ್ಚಿನ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಉನ್ನತ ಗುರಿಯನ್ನು ಹೊಂದುವ ಮೂಲಕ ಮತ್ತು ಅದನ್ನು ಸಾಧಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಅಂದಾಗ ಮಾತ್ರ ಸಾಧನೆ ಮಾಡಲು ಸಾಧ್ಯ’ ಎಂದರು.

ಸಾರಿಗೆ ಇಲಾಖೆ ಜಂಟಿ ಆಯುಕ್ತ ಮಾರುತಿ ಸಾಂಬ್ರಾಣಿ ಮಾತನಾಡಿ, ‘ಜಗತ್ತಿನಲ್ಲಿ ಭಾರತ ಅತಿಹೆಚ್ಚು ಯುವ ಸಮೂಹವನ್ನು ಹೊಂದಿದೆ. ವಿದ್ಯಾರ್ಥಿಗಳು ಜೀವನದಲ್ಲಿ ಸಕಾರಾತ್ಮಕ ಚಿಂತನೆ ಹೊಂದುವ ಮೂಲಕ ಯಶಸ್ಸು ಸಾಧಿಸಬೇಕು’ ಎಂದು ಸಲಹೆ ನೀಡಿದರು.

ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಎಸ್‌ಡಿಎಂ ಕಾರ್ಯದರ್ಶಿ ಜೀವಂಧರ್ ಕುಮಾರ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಡಾ.ಎಸ್.ಬಿ.ವನಕುದುರೆ, ಡೀನ್‌ ಡಾ.ಕೆ.ಗೋಪಿನಾಥ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry