ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ ಎಸ್‌ಪಿ ಕಚೇರಿ ಎದುರು ಪ್ರತಿಭಟನೆ

7
ಎಸ್ಪಿ ಕಚೇರಿ ಎದುರು ವೀರಾಪುರ ಮಹಿಳೆಯರ ಪ್ರತಿಭಟನೆ

ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ ಎಸ್‌ಪಿ ಕಚೇರಿ ಎದುರು ಪ್ರತಿಭಟನೆ

Published:
Updated:

ಹಾಸನ : ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ತಾಲ್ಲೂಕಿನ ಸಾಲಗಾಮೆ ಹೋಬಳಿ ವೀರಾಪುರ ಗ್ರಾಮದ ಮಹಿಳೆಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಸುಮಾರು 250 ಕುಟುಂಬಗಳು ವಾಸಿಸುತ್ತಿದ್ದು, ಎಲ್ಲರೂ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ಇತ್ತೀಚೆಗೆ ಗ್ರಾಮದ 4 ಕುಟುಂಬಗಳು ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಮೂಲಕ ನೆಮ್ಮದಿ ಹಾಳು ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಯುವಕರಿಂದ ವೃದ್ಧರ ವರೆಗೂ ಮದ್ಯಪಾನ ಚಟಕ್ಕೆ ಬಲಿಯಾಗಿ ದುಡಿದ ಹಣವನ್ನೆಲ್ಲ ಕುಡಿತಕ್ಕೆ ಖರ್ಚು ಮಾಡುತ್ತಿದ್ದಾರೆ. ಕುಡಿದು ಬಂದು ಹೊಡೆಯುತ್ತಾರೆ. ಇದರಿಂದ ಜೀವನ ಸಾಗಿಸುವುದೇ ಕಷ್ಟಕರ ಎಂದು ಅಳಲು ತೋಡಿಕೊಂಡರು.

ಅಬಕಾರಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳ ಕುಮ್ಮುಕ್ಕಿನಿಂದಲೇ ಗ್ರಾಮದಲ್ಲಿ ಮದ್ಯ ಮಾರಾಟ ಹೆಚ್ಚಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಎಸ್‌ಪಿ ರಾಹುಲ್‌ಕುಮಾರ್ ಶಹಪುರವಾಡ್ ಅವರಿಗೆ ಮನವಿ ಸಲ್ಲಿಸಿದರು.

ವೀರಾಪುರ ಗ್ರಾಮದ ನವೀನಾ, ಮಂಜುಳಾ, ಪುಷ್ಪ, ಸವಿತಾ, ಪ್ರೇಮಾ, ಲಾವಣ್ಯ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry