ಸೂಚ್ಯಂಕ 510 ಅಂಶ ಇಳಿಕೆ

7
ಷೇರುಪೇಟೆ ವಹಿವಾಟಿನ ಮೇಲೆ ದೇಶಿ, ಜಾಗತಿಕ ವಿದ್ಯಮಾನಗಳ ಪ್ರಭಾವ

ಸೂಚ್ಯಂಕ 510 ಅಂಶ ಇಳಿಕೆ

Published:
Updated:

ಮುಂಬೈ (ಪಿಟಿಐ): ದೇಶಿ ಮತ್ತು ಜಾಗತಿಕ ವಿದ್ಯಮಾನಗಳ ಪ್ರಭಾವಕ್ಕೆ ಒಳಗಾಗಿ ದೇಶದ ಷೇರುಪೇಟೆ ವಹಿವಾಟು ಶುಕ್ರವಾರವೂ ಇಳಿಕೆ ಕಂಡಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 510 ಅಂಶ ಇಳಿಕೆ ಕಂಡಿತು. ಫೆಬ್ರುವರಿ 6 ರ ನಂತರ ದಿನದ ವಹಿವಾಟಿನಲ್ಲಿ ಸೂಚ್ಯಂಕದ ಗರಿಷ್ಠ ಕುಸಿತ ಇದಾಗಿದೆ. 33,176 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.

ಹಿಂದಿನ ಮೂರು ವಹಿವಾಟು ಅವಧಿಯಲ್ಲಿ ಸೂಚ್ಯಂಕವು 232 ಅಂಶಗಳಷ್ಟು ಇಳಿಕೆ ಕಂಡಿತ್ತು.

ತೈಲ ಮತ್ತು ಅನಿಲ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ವಿದ್ಯುತ್‌, ಆಟೊ ಮತ್ತು ಬ್ಯಾಂಕಿಂಗ್‌ವಲಯದ ಷೇರುಗಳು ಹೆಚ್ಚು ನಷ್ಟ ಅನುಭವಿಸಿದವು.

ಗುರುವಾರದ ವಹಿವಾಟಿನಲ್ಲಿ ವಿದೇಶಿ ಹೂಡಿಕೆದಾರರು ₹ 705 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 165 ಅಂಶ ಇಳಿಕೆ ಕಂಡು, 10,195 ಅಂಶಗಳಲ್ಲಿ ವಹಿವಾಟ ಅಂತ್ಯವಾಗಿದೆ.

ಎನ್‌ಡಿಎ ಮೈತ್ರಿಕೂಟದಿಂದ ಟಿಡಿಪಿ ಹೊರಬಂದಿದೆ. ಕೇಂದ್ರ  ಸರ್ಕಾರದ ವಿರುದ್ಧ ಅವಿಶ್ವಾಸ ವ್ಯಕ್ತಪಡಿಸಿದೆ. ಇದು ಷೇರುಪೇಟೆಯಲ್ಲಿ ಮಾರಾಟದ ಒತ್ತಡ ಸೃಷ್ಟಿಸಿತು. ಅಮೆರಿಕದ ವ್ಯಾಪಾರ ನೀತಿಯು ಜಾಗತಿಕ ವ್ಯಾಪಾರದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಈ ಅಂಶವೂ ಹೂಡಿಕೆದಾರರನ್ನು ಆತಂಕಕ್ಕೆ ದೂಡಿದ್ದು, ಸೂಚ್ಯಂಕವನ್ನು ಇಳಿಕೆ ಕಾಣುವಂತೆ ಮಾಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry