22ಕ್ಕೆ ಕಾವೇರಿ ಜಲವಿವಾದ ತೀರ್ಪಿನ ಚರ್ಚೆ

7

22ಕ್ಕೆ ಕಾವೇರಿ ಜಲವಿವಾದ ತೀರ್ಪಿನ ಚರ್ಚೆ

Published:
Updated:

ನವದೆಹಲಿ: ಕಾವೇರಿ ಜಲವಿವಾದ ಕುರಿತಂತೆ ಸುಪ್ರೀಂ ಕೋರ್ಟ್‌ ಇತ್ತೀಚೆಗೆ ನೀಡಿರುವ ತೀರ್ಪಿನ ಕುರಿತು ಚರ್ಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಂಜೆ ಇಲ್ಲಿನ ಕರ್ನಾಟಕ ಭವನದಲ್ಲಿ ಆಯೋಜಿಸಿದ್ದ ಸರ್ವಪಕ್ಷಗಳ ಸಂಸದರ ಸಭೆಯನ್ನು ಇದೇ 22ಕ್ಕೆ ಮುಂದೂಡಲಾಗಿದೆ.

ಅಧಿವೇಶನದಲ್ಲಿ ಪಾಲ್ಗೊಂಡಿರುವ ಎಲ್ಲ ಸಂಸದರಿಗೆ ಸಭೆಯಲ್ಲಿ ಭಾಗವಹಿಸಲು ಆಗುವುದಿಲ್ಲ ಎಂಬ ಮಾಹಿತಿ ದೊರೆತಿದೆ. ಅದಕ್ಕಾಗಿ ಇದೇ 22ರಂದು ಬೆಂಗಳೂರಿನಲ್ಲಿ ಸಭೆ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry