‘ಪ್ರಧಾನಿ ವಿರುದ್ಧ ದೂರು’

7

‘ಪ್ರಧಾನಿ ವಿರುದ್ಧ ದೂರು’

Published:
Updated:
‘ಪ್ರಧಾನಿ ವಿರುದ್ಧ ದೂರು’

ನವದೆಹಲಿ: ‘ಸಿದ್ದರಾಮಯ್ಯ ಅವರದ್ದು ಪರ್ಸೆಂಟೇಜ್‌ ಸರ್ಕಾರ. ಅವರದು ಸೀದಾ ರುಪಯ್ಯಾ ಸರ್ಕಾರ’ ಎಂಬ ಹೇಳಿಕೆ ನೀಡಿರುವ ಪ್ರಧಾನಿ ಮೋದಿ ವಿರುದ್ಧ ಹೈಕೋರ್ಟ್‌ನಲ್ಲಿ ದೂರು ಸಲ್ಲಿಸಲು ರಾಜ್ಯ ಕಾಂಗ್ರೆಸ್‌ ನಿರ್ಧರಿಸಿದೆ.

‘ಸಿದ್ದರಾಮಯ್ಯ ಅವರು ಮಾತೆತ್ತಿದರೆ ಯಡಿಯೂರಪ್ಪ ಅವರು ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಪ್ರಸ್ತಾಪಿಸುತ್ತಾರೆ’ ಎಂದು ದೂರಿ ಯಡಿ

ಯೂರಪ್ಪ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿರುವ ಬೆನ್ನಲ್ಲೇ, ಸಿದ್ದರಾಮಯ್ಯ ಅವರೂ ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದ್ದಾರೆ.

ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರದ ಸಚಿವರು, ಪಕ್ಷದ ರಾಜ್ಯ ಘಟಕದ ಮುಖಂಡರು, ಸಂಸದರು ಮುಖ್ಯಮಂತ್ರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಾರೆ; ಅದನ್ನು ಪ್ರಶ್ನಿಸಿ ಮಾರ್ಚ್‌ 19ರಂದು ರಾಜ್ಯ ಹೈಕೋರ್ಟ್‌ನಲ್ಲಿ ದೂರು ದಾಖಲಿಸಲಾಗುವುದು ಎಂದು ಪಕ್ಷದ ಮೂಲಗಳು ‘ಪ್ರಜಾವಾಣಿ’ಗೆತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry