ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಹೆಚ್ಚಳ: ಸಚಿವ ರಾಧಾಮೋಹನ್‌

7

ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಹೆಚ್ಚಳ: ಸಚಿವ ರಾಧಾಮೋಹನ್‌

Published:
Updated:

ನವದೆಹಲಿ: 2015ಕ್ಕೆ ಹೋಲಿಸಿದರೆ 2016ರಲ್ಲಿ ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇ 32ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಕೃಷಿ ಸಚಿವ ರಾಧಾಮೋಹನ್‌ ಸಿಂಗ್‌ ಅವರು ಶುಕ್ರವಾರ ಲೋಕಸಭೆಗೆ ನೀಡಿದ ಉತ್ತರದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಮಾಹಿತಿಯನ್ನು ಉಲ್ಲೇಖಿಸಿರುವ ಸಿಂಗ್‌, 2016ರಲ್ಲಿ ಕರ್ನಾಟಕದಲ್ಲಿ 2,079 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2015ರಲ್ಲಿ ಈ ಸಂಖ್ಯೆ 1,569 ಆಗಿತ್ತು ಎಂದಿದ್ದಾರೆ.

ದೇಶದ ಇತರ ದೊಡ್ಡ ರಾಜ್ಯಗಳಲ್ಲಿ ರೈತರ ಆತ್ಮಹತ್ಯೆ ಪ್ರಮಾಣದಲ್ಲಿ ಶೇ 10ರಷ್ಟು ಇಳಿಕೆಯಾಗಿದೆ. ಆದರೆ ಕರ್ನಾಟಕದಲ್ಲಿ ಪರಿಸ್ಥಿತಿ ಭಿನ್ನವಾಗಿದೆ ಎಂದು ಅವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry