3

ಪ್ರತ್ಯೇಕ ರಾಜ್ಯ: ಬೆಂಬಲಕ್ಕೆ ಮನವಿ

Published:
Updated:

ಬಳ್ಳಾರಿ: ‘ಮುಂಬೈ ಕರ್ನಾಟಕದ 07 ಹಾಗೂ ಹೈದರಾಬಾದ್‌ ಕರ್ನಾಟಕದ 6 ಜಿಲ್ಲೆಗಳು ಸೇರಿ 13 ಜಿಲ್ಲೆಗಳನ್ನು ಒಳಗೊಂಡ ಪ್ರತ್ಯೇಕ ರಾಜ್ಯವನ್ನು ಸ್ಥಾಪಿಸಬೇಕು’ ಎಂದು ಅಖಿಲ ಭಾರತ ಜನಗಣ ಒಕ್ಕೂಟದ ಸಂಚಾಲಕ ಎನ್‌.ಗಂಗಿರೆಡ್ಡಿ ಆಗ್ರಹಿಸಿದರು.

‘ಉತ್ತರ ಕರ್ನಾಟಕಕ್ಕೆ ಸೇರಿದ ಈ ಜಿಲ್ಲೆಗಳ ಅಭಿವೃದ್ಧಿಯನ್ನು ಕಡೆಗಣಿಸಲಾಗಿದೆ. ರಾಜ್ಯಗಳು ಚಿಕ್ಕದಾಗಿದ್ದಷ್ಟೂ ಅಭಿವೃದ್ಧಿಗೆ ಆದ್ಯತೆ ದೊರಕುತ್ತದೆ ಎಂದು ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿಪಾದಿಸಿದ್ದ ಎನ್‌ಡಿಎ ಮೈತ್ರಿಕೂಟವೇ ಈಗ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಹೀಗಾಗಿ, ಕೂಡಲೇ ಪ್ರತ್ಯೇಕ ರಾಜ್ಯಕ್ಕೆ ಕ್ರಮ ವಹಿಸಬೇಕು’ ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

‘ಪ್ರತ್ಯೇಕ ರಾಜ್ಯ ರಚಿಸಲು ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಮಾರ್ಚ್ 22ರಂದು ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಗುವುದು. ನಗರದಲ್ಲಿ ಮೆರವಣಿಗೆ ನಡೆಸಲಾಗುವುದು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry