ಒಂದೇ ಕುಟುಂಬದ ನಾಲ್ವರು ಫಲಾನುಭವಿ

7
ಪಿಡಿಒ ವಿರುದ್ಧ ಕ್ರಮ ಕೈಗೊಳ್ಳುವಂತೆ ಉಪಾಧ್ಯಕ್ಷೆ ದೂರು

ಒಂದೇ ಕುಟುಂಬದ ನಾಲ್ವರು ಫಲಾನುಭವಿ

Published:
Updated:

ಚಿತ್ತಾಪುರ: ‘ತಾಲ್ಲೂಕಿನ ಮಾಲಗತ್ತಿ ಗ್ರಾಮ ಪಂಚಾಯಿತಿಯಲ್ಲಿ ರಾಜೀವಗಾಂಧಿ ಚೈತನ್ಯ ಯೋಜನೆಯಡಿ ಒಂದೇ ಕುಟುಂಬದ ನಾಲ್ವರನ್ನು ಫಲಾನುಭವಿಯಾಗಿ ಆಯ್ಕೆ ಮಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾದೇವಿ ಸುಶೀಲಕುಮಾರ ಸಂಕನೂರ ಆಗ್ರಹಿಸಿದ್ದಾರೆ.

ಈ ಕುರಿತು ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ಸಲ್ಲಿಸಿರುವ ಅವರು, ‘ಮಾಲಗತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಂಕರವಾಡಿ ಗ್ರಾಮದಲ್ಲಿ ರಾಜೀವಗಾಂಧಿ ಚೈತನ್ಯ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಒಂದೇ ಕುಟುಂಬದ ಮಂಜುನಾಥ ಶಿವಶರಣಪ್ಪ, ಸೌಜನ್ಯ ಚಂದ್ರಕಾಂತ, ಕಾಶಿನಾಥ ಶಿವಶರಣಪ್ಪ, ಕಾಶಿಬಾಯಿ ಶಿವಶರಣಪ್ಪ ಎಂಬುವರನ್ನು ಆಯ್ಕೆ ಮಾಡಲಾಗಿದೆ’

ಎಂದು ದೂರಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry